ಆರ್ ಎಸ್ ಎಸ್ ಆಹ್ವಾನವನ್ನು ಒಪ್ಪಿಕೊಳ್ಳದಂತೆ ರಾಹುಲ್ ಗಾಂಧಿಗೆ ಕಾಂಗ್ರೆಸ್ ಸಲಹೆ
ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಆಹ್ವಾನವನ್ನು ಒಪ್ಪಿಕೊಳ್ಳದಂತೆ ಹಿರಿಯ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಸಲಹೆ ನೀಡಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಮುಂದಿನ ತಿಂಗಳು ಸೆಪ್ಟೆಂಬರ್ 17 ರಿಂದ 19 ರವರೆಗೆ ದೆಹಲಿಯ ವಿಜ್ಞಾನ ಭವನದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಆಯೋಜಿಸಲಿರುವ ಸರಣಿ ಉಪನ್ಯಾಸ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಅವರನ್ನು ಆಹ್ವಾನಿಸುವ ಸಾಧ್ಯತೆ ಇದೆ ಎಂಬಂತಹ ವರದಿಗಳ ಬೆನ್ನಲ್ಲೇ ಹಿರಿಯ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿಗೆ ಈ ಸಲಹೆ ನೀಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷರನ್ನು ಹೊರತುಪಡಿಸಿ ಎಡಪಕ್ಷದ ಸೀತಾರಾಂ ಯೆಚೂರಿ ಮತ್ತಿತರ ವಿವಿಧ ವಿಚಾರಧಾರೆಗಳನ್ನು ಹೊಂದಿರುವ ನಾಯಕರನ್ನು ಆಹ್ವಾನಿಸಿ ಉಪನ್ಯಾಸ ನೀಡಿಸಲು ಆರ್ ಎಸ್ ಎಸ್ ಮುಂದಾಗಿತ್ತು ಎಂದು ಮೂಲಗಳಿಂದ ತಿಳಿದುಬಂದಿದೆ.
ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾರತದ ಭವಿಷ್ಯ ಮತ್ತು ಆರ್ ಎಸ್ ಎಸ್ ಪರಿಕಲ್ಪನೆ ಹಾಗೂ ರಾಷ್ಟ್ರದ ಹಿತಸಕ್ತಿಯಲ್ಲಿ ಪ್ರಸ್ತುತ ರಾಷ್ಟ್ರೀಯ ಸ್ವಯಂ ಸೇವ ಸಂಘದ ಪಾತ್ರ ಕುರಿತಂತೆ ಉಪನ್ಯಾಸ ನೀಡಲಿದ್ದಾರೆ.