ಪ್ರವಾಹದಲ್ಲಿ ತೇಲಿ ಬಂದ ತ್ಯಾಜ್ಯ ಮತ್ತೆ ನದಿಗೆ, ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ
ತಿರುವನಂತಪುರಂ: ಶತಮಾನದ ಭೀಕರ ಪ್ರವಾಹಕ್ಕೆ ಸಾಕ್ಷಿಯಾದ ಕೇರಳದಲ್ಲಿ ಅಧಿಕಾರಿಗಳ ಯಡವಟ್ಟೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಭೀಕರ ಪ್ರವಾಹಕ್ಕೆ ತುತ್ತಾದ ರಾಜ್ಯದಲ್ಲಿ ಅಧಿಕಾರಿಗಳ ಯಡವಟ್ಟು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ನದಿಗೆ ಅಡ್ಡಲಾಗಿ ಕಟ್ಟಿದ್ದ ಸೇತುವೆ ಮೇಲೆ ಸಂಗ್ರಹವಾಗಿದ್ದ ಅಪಾರ ಪ್ರಮಾಣದ ತ್ಯಾಜ್ಯವನ್ನು ಜೆಸಿಬಿಗಳ ನೆರವಿನಿಂದಾಗಿ ಮತ್ತೆ ನದಿಗೆ ಹಾಕಲಾಗುತ್ತಿದೆ. ಸ್ಥಳೀಯರೊಬ್ಬರು ಈ ವಿಡಿಯೋವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ.
ಇದೀಗ ಈ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದ್ದು, ಅಧಿಕಾರಿಗಳ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈಗಾಗಲೇ ಪ್ರವಾಹದಿಂದ ನರಳುತ್ತಿರುವ ಕೇರಳದಲ್ಲಿ ನದಿಗೆ ತ್ಯಾಜ್ಯವನ್ನು ಸುರಿಯುವುದರಿಂದ ನೀರಿನ ಹರಿವಿನ ಮೇಲೆ ಅಡ್ಡ ಪರಿಣಾಮ ಉಂಟಾಗುತ್ತದೆ. ನೀರಿನ ಹರಿವು ನಿಧಾನವಾಗಿ ಪ್ರವಾಹ ನೀರು ಸಮುದ್ರ ಸೇರುವುದು ತಡವಾಗುತ್ತದೆ ಎಂದು ಆಕ್ರೋಶ ವ್ಯಕ್ತವಾಗುತ್ತಿದೆ.
ಪ್ರವಾಹದಿಂದಾಗಿ ರಸ್ತೆಗಳು ಕೊಚ್ಚಿಹೋಗಿದ್ದರೂ ತ್ಯಾಜ್ಯವನ್ನು ನದಿಗೆ ಸುರಿಯುತ್ತಿರುವುದು ನಿಜಕ್ಕೂ ಅಕ್ಷಮ್ಯ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.