HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                ಪ್ರಭಾವತಿ ಕೆದಿಲಾಯರಿಗೆ ವಿಶ್ವೇಶ್ವರಯ್ಯ ಪ್ರಶಸ್ತಿ ಪ್ರದಾನ
    ಬದಿಯಡ್ಕ : ಇಲ್ಲಿನ ಪೆರಡಾಲ ನವಜೀವನ ಪ್ರೌಢಶಾಲೆಯ ಶಿಕ್ಷಕಿ ಪುಂಡೂರು ಪ್ರಭಾವತಿ ಕೆದಿಲಾಯರಿಗೆ ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ಬೆಂಗಳೂರಿನ ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ಆಶ್ರಯದಲ್ಲಿ ವಿಶ್ವೇಶ್ವರಯ್ಯ ಅವರ 157ನೇ ಜನ್ಮದಿನಾಚರಣೆಯ ಅಂಗವಾಗಿ ನೀಡುವ ಈ ವರ್ಷದ ವಿಶ್ವೇಶ್ವರಯ್ಯ ಶಿಕ್ಷಕ ಪ್ರಶಸ್ತಿಯನ್ನು ಶನಿವಾರ ಮೈಸೂರಿನ ರಂಗಚಾರಲು ಪುರಭವನದಲ್ಲಿ ಪ್ರದಾನ ಮಾಡಲಾಯಿತು.
   ಸಮ್ಮೇಳನದ ಅಧ್ಯಕ್ಷತೆಯನ್ನು ಮೈಸೂರು ಮಹಾನಗರ ಪಾಲಿಕೆ ಮಾಜಿ ಆಯುಕ್ತ ಡಾ ಡಿ ಎಸ್ ಅಶ್ವಥ್ ವಹಿಸಿದ್ದರು. ಮೈಸೂರಿನ ಹಿರಿಯ ಸಾಹಿತಿ ಡಾ. ಮಳಲಿ ವಸಂತ ಕುಮಾರ ಅಧ್ಯಕ್ಷತೆ ವಹಿಸಿದ್ದರು. ಪ್ರಭಾವತಿ ಕೆದಿಲಾಯರನ್ನು ಚಲಚಚಿತ್ರ ನಟ ಡಾ. ನೆ.ಲ. ನರೇಂದ್ರಬಾಬು ಹಾಗೂ ಚುಟುಕು ಸಾಹಿತ್ಯ ಪರಿಷತ್ತಿನ ಕನರ್ಾಟಕ ರಾಜ್ಯ ಸಂಚಾಲಕ ಡಾ. ಎಂ ಜಿ ಆರ್ ಅರಸ್ ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.
   ಡಾ. ಬಸವರಮಾನಂದ ಮಹಾಸ್ವಾಮಿ ಹಾಗೂ ಕಲ್ಮೇಶ್ವರ ಮಹಾಸ್ವಾಮಿ ಆಶೀರ್ವಚನ ನೀಡಿದರು. ಕನರ್ಾಟಕ ಉನ್ನತ ಶಿಕ್ಷಣ ಸಚಿವ ಜಿ ಟಿ ದೇವೇಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಅನೇಕ ಮಂದಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಚಲನಚಿತ್ರ ಕಲಾವಿದರಾದ ಶಂಕರ ಭಟ್, ಮೀನಾ. ಪ್ರತಿಷ್ಠಾನದ ಮುಖಂಡರಾದ ಡಾ. ಶಮರ್ಾ ಎಲ್ ಸುರೇಶ್, ಎಸ್ ವೆಂಕಟೇಶ್, ಡಾ. ಎಂ ತಾಹಿರ್, ಕಸ್ತೂರಿ ಚಂದ್ರು, ರಮೇಶ ಸುವರ್ೆ, ಮಂಜುನಾಥ ಗೊಂಡಬಾಳ ಮೊದಲಾದವರು ಇದ್ದರು. ಈ ಸಂದರ್ಭದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದುವು.
 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries