ಮಂಜೇಶ್ವರ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಅಯ್ಯಪ್ಪ ಕ್ಷೇತ್ರ ಹೊಸಂಗಡಿ ಇದರ ಆಶ್ರಯದಲ್ಲಿ ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ ಗುರುವಾರದಿಂದ ಆರಂಭಗೊಂಡ 38ನೇ ವರ್ಷದ ಮಂಜೇಶ್ವರ ಶ್ರೀ ಗಣೇಶೋತ್ಸವ ಸಾಮೂಹಿಕ ಪ್ರಾರ್ಥನೆಯೊಂದಿಗೆ ಚಾಲನೆಗೊಂಡಿತು.
ಬಳಿಕ ಗಣಹೋಮ, ಗೌರಿಪೂಜೆ, ಶ್ರೀ ಗಣಪತಿ ದೇವರ ಪ್ರತಿಷ್ಠೆ ನಡೆದು ಸಮಿತಿಯ ಅಧ್ಯಕ್ಷ ಪದ್ಮನಾಭ ಕಡಪ್ಪರರವರು ಧ್ವಜಾರೋಹಣಗೈದರು. ಮಂಜೇಶ್ವರ ಶ್ರೀಮತ್ ಅನಂತೇಶ್ವರ ದೇವಸ್ಥಾನದ ಅರ್ಚಕ ಸುರೇಶ್ ಭಟ್ ಭದ್ರದೀಪ ಬೆಳಗಿಸಿದರು. ಬಳಿಕ ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದವರಿಂದ ಭಜನೆ, ವಿವಿಧ ಆಟೋಟ ಸ್ಪಧರ್ೆಗಳು, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು