HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                 ಭಾರತ'ಕ್ಕೆ ತೈಲ ಪೂರೈಕೆಗೆ ಪಯರ್ಾಯ ವ್ಯವಸ್ಥೆ ಮಾಡುತ್ತೇವೆ: ಅಮೆರಿಕ
   ನ್ಯೂಯಾಕರ್್: ಇರಾನ್ ಮೇಲೆ ಅಮೆರಿಕ ವಿಧಿಸಿರುವ ಕಠಿಣ ನಿರ್ಬಂಧಗಳು ನವೆಂಬರ್ 4ರಿಂದ ಜಾರಿಗೆ ಬರಲಿದ್ದು, ತೈಲಕ್ಕಾಗಿ ಇರಾನ್ ಅನ್ನು ಅವಲಂಬಿಸಿರುವ ಭಾರತಕ್ಕೆ ಪಯರ್ಾಯ ಪೂರೈಕೆ ಮಾರ್ಗಗಳನ್ನು ಒದಗಿಸುವುದಾಗಿ ಅಮೆರಿಕ ಶನಿವಾರ ಹೇಳಿದೆ.
   'ಭಾರತಕ್ಕೆ ಹೆಚ್ಚಿನ ಪ್ರಮಾಣದ ತೈಲ ಆಮದು ಅಗತ್ಯ ಇರುವುದನ್ನು ವಾಷಿಂಗ್ಟನ್ ಗಮನಿಸಿದೆ. ಇದಕ್ಕಾಗಿ ಪಯರ್ಾಯ ತೈಲ ಪೂರೈಕೆ ಕ್ರಮಗಳ ಬಗ್ಗೆ ಮಾತುಕತೆ ನಡೆಸಲಾಗುತ್ತಿದೆ. ನಮ್ಮ ಸ್ನೇಹಿತ ರಾಷ್ಟ್ರವಾದ ಭಾರತದ ಆಥರ್ಿಕತೆ ಮೇಲೆ ಯಾವುದೇ ಕೆಟ್ಟ ಪರಿಣಾಮ ಉಂಟಾಗುವುದಿಲ್ಲ' ಎಂದು ಟ್ರಂಪ್ ಆಡಳಿತದ ಅಧಿಕಾರಿಯೊಬ್ಬರು ಹೇಳಿದ್ದಾರೆ.
   2015ರಲ್ಲಿ ಇರಾನ್ ಮೇಲಿನ ನಿರ್ಬಂಧಗಳನ್ನು ತೆರವುಗೊಳಿಸಿದ್ದ ಅಮೆರಿಕ, ಅದು ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿದೆ ಎಂದು ಆರೋಪಿಸಿ ಈ ವರ್ಷದ ಆರಂಭದಲ್ಲಿ ಮತ್ತೆ ನಿರ್ಬಂಧ ವಿಧಿಸಿತ್ತು.
   ನಿರ್ಬಂಧದ ಮೊದಲ ಹಂತ ಈಗಾಗಲೇ ಜಾರಿಯಲ್ಲಿದ್ದು, ಅದು ನವೆಂಬರ್ 4ರಿಂದ ಪೂರ್ಣ ಪ್ರಮಾಣದಲ್ಲಿ ಜಾರಿಯಾಗಲಿದೆ. ಈ ಅವಧಿಯಲ್ಲಿ ಭಾರತ ಸೇರಿದಂತೆ ಎಲ್ಲ ದೇಶಗಳೂ ಇರಾನ್ನಿಂದ ತೈಲ ಆಮದು ಮಾಡಿಕೊಳ್ಳುವುದನ್ನು ಸಂಪೂರ್ಣ ಸ್ಥಗಿತಗೊಳಿಸಲಿವೆ ಎಂದು ಅಮೆರಿಕ ನಿರೀಕ್ಷಿಸಿದೆ.
   ಇರಾನ್ ಜೊತೆ ಯಾವುದೇ ರೀತಿಯ ವ್ಯವಹಾರ ಮುಂದುವರಿಸುವ ಯಾವುದೇ ದೇಶವು ತನ್ನ ಬ್ಯಾಂಕಿಂಗ್ ಮತ್ತು ಹಣಕಾಸು ವ್ಯವಸ್ಥೆಯೊಳಗೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗುವುದು ಎಂದು ಅಮೆರಿಕ ಸ್ಪಷ್ಟಪಡಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries