84ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಚಂದ್ರಶೇಖರ ಕಂಬಾರ ಆಯ್ಕೆ
ಗದಗ: ಧಾರವಾಡದಲ್ಲಿ ನಡೆಯಲಿರುವ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ ಅವರನ್ನು ಆಯ್ಕೆ ಮಾಡಲಾಗಿದೆ.
ಗುರುವಾರ ಗದಗದಲ್ಲಿ ನಡೆದ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚಂದ್ರಶೇಖರ ಕಂಬಾರ ಅವರನ್ನು ಸವರ್ಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ಅವರು ತಿಳಿಸಿದ್ದಾರೆ.
ಕಾರ್ಯಕಾರಿ ಸಭೆಯ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮನು ಬಳಿಗಾರ್ ಅವರು 84ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ 7 ಮತ್ತು ಡಿಸೆಂಬರ್ 8ರಂದು ಧಾರವಾಡದಲ್ಲಿ ನಡೆಯಲಿದೆ ಎಂದು ಹೇಳಿದರು.
ಚಂದ್ರಶೇಖರ ಕಂಬಾರ ಅವರು ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರೂ ಆಗಿದ್ದಾರೆ.