HEALTH TIPS

ಯಾವುದೇ ಶೀರ್ಷಿಕೆಯಿಲ್ಲ

               ಅಗ್ನಿ ಫ್ರೆಂಡ್ಸ್ ವತಿಯಿಂದ ಉಚಿತ ವೈದ್ಯಕೀಯ ಶಿಬಿರಗಳು
    ಉಪ್ಪಳ: ಮಂಗಳೂರಿನ ಶ್ರೀಸತ್ಯಸಾಯಿ ಸೇವಾ ಸಮಿತಿ, ಈಶ್ವರಾಂಬಾ ಟ್ರಸ್ಟ್ ಆಶ್ರಯದಲ್ಲಿ ಉಪ್ಪಳದ ಅಗ್ನಿ ಪ್ರೆಂಡ್ಸ್ನ ದಶಮಾನೋತ್ಸವದ ಅಂಗವಾಗಿ ಲಯನ್ಸ್ ಕ್ಲಬ್ ಮಂಜೇಶ್ವರ-ಉಪ್ಪಳ ಸಹಯೋಗದೊಂದಿಗೆ ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಸಹಕಾರದೊಂದಿಗೆ ಉಚಿತ ವೈದ್ಯಕೀಯ ಶಿಬಿರ ಮತ್ತು ದೇರಳಕಟ್ಟೆಯ ಯೆನಪೋಯ ದಂತ ವೈದ್ಯಕೀಯ ಆಸ್ಪತ್ರೆಯವರಿಂದ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಇತ್ತೀಚೆಗೆ ಉಪ್ಪಳ ನಯಾಬಝಾರಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು.
  ಅಗ್ನಿ ಫ್ರೆಂಡ್ಸ್ನ ಅಧ್ಯಕ್ಷ ಲೋಹಿತ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಶಿಬಿರದ ಮೊದಲು ನಡೆದ ಸಮಾರಂಭದಲ್ಲಿ ಅತ್ತಾವರ ಕೆಎಂಸಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಕಾತರ್ಿಕ್ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಅವರು ಮಾತನಾಡಿ ಜನಸಾಮಾನ್ಯರಿಗೆ ಗುಣಮಟ್ಟದ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸುವುವ ನಿಟ್ಟಿನಲ್ಲಿ ಸಂಘಟನೆಗಳು ಸೇವಾ ಚಟುವಟಿಕೆ ನಿರ್ವಹಿಸುತ್ತಿರುವುದು ಮಾದರಿಯಾಗಿದ್ದು, ಸಾರ್ವಜನಿಕರು ಗರಿಷ್ಠ ಪ್ರಮಾಣದ ಪ್ರಯೋಜನಗಳನ್ನು ಪಡೆಯಬೇಕು ಎಂದು ತಿಳಿಸಿದರು.
   ಯೆನಪೋಯ ದಂತ ವೈದ್ಯಕೀಯ ಆಸ್ಪತ್ರೆಯ ಡಾ.ಸಫಾ, ಆಸ್ಪತ್ರೆಯ ಸಂಪಕರ್ಾಧಿಕಾರಿ ಭರತ್ ಕುಮಾರ್, ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರಸಾದ್ ಕೆ, ಭಾರತ ಮೀಸಲು ಸೇನೆಯ ಕಮಾಂಡರ್ ಸನೇಶ್ ಕುಮಾರ್, ಸತ್ಯಸಾಯಿ ಸೇವಾ ಸಮಿತಿಯ ಸುರೇಶ್ ಉಪಸ್ಥಿತರಿದ್ದು ಶುಭಹಾರೈಸಿದರು. ಧನೇಶ್ ಪ್ರತಾಪನಗರ ಸ್ವಾಗತಿಸಿ, ವಂದಿಸಿದರು. ಬಳಿಕ ನಡೆದ ಶಿಬಿರದಲ್ಲಿ ನೂರಕ್ಕೂ ಮಿಕ್ಕಿದ ಸಾರ್ವಜನಿಕರು ಪಾಲ್ಗೊಂಡು ಶಿಬಿರದ ಪ್ರಯೋಜನ ಪಡೆದರು.
   

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries