ಉಚಿತ ಕಣ್ಣಿನ ಪೊರೆ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
ಮಂಜೇಶ್ವರ: ಶ್ರೀ ಧರ್ಮಚಕ್ರ ಟ್ರಸ್ಟ್ ಶ್ರೀ ಭಾರತೀ ನೇತ್ರ ಚಿಕಿತ್ಸಾಲಯ ಮುಜುಂಗಾವು ಹಾಗೂ ಕಾಸರಗೋಡು ಜಿಲ್ಲಾ ಅಂಧತ್ವ ನಿವಾರಣಾ ಸಮಿತಿ ಆಶ್ರಯದಲ್ಲಿ ಫ್ರೆಂಡ್ಸ್ ಕ್ಲಬ್ ಅಡೆಕಳಕಟ್ಟೆ ಕೊಡ್ಳಮೊಗರು ಇವರ ಪ್ರಾಯೋಜಕತ್ವದಲ್ಲಿ ಕೊಡ್ಳಮೊಗರು ಶ್ರೀವಾಣೀವಿಜಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಉಚಿತ ಕಣ್ಣಿನ ಪೊರೆ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ಯಶಸ್ವಿಯಾಗಿ ಜರಗಿತು.
ನಿವೃತ್ತ ಮುಖ್ಯೋಪಾಧ್ಯಾಯಿನಿ ಅನಸೂಯಾ ದೇವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ದೀಪ ಬೆಳಗಿಸಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಇಸ್ಮಾಯಿಲ್ ಕಾಂತಮಜಲು ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಶುಭಹಾರೈಸಿದರು.
ಚಿಕಿತ್ಸಾಲಯದ ಆಡಳಿತಾಧಿಕಾರಿಗಳಾದ ಲಯನ್.ಡಾ.ಯಂ ಶ್ರೀಧರ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ನೇತ್ರ ಚಿಕಿತ್ಸಾಲಯದ ಸೇವೆಗಳ ಬಗ್ಗೆ ಮಾಹಿತಿ ನೀಡಿದರು. ಶಿಕ್ಷಕ ಜಯ ಪ್ರಶಾಂತ್ ಸ್ವಾಗತಿಸಿ, ನಿರೂಪಿಸಿದರು. ಗೌತಮಿ ವಂದಿಸಿದರು.
ಯಸ್ ಯನ್ ಶರ್ಮ ಸೇಡಿಗುಮ್ಮೆ, ಅಜರ್ುನಗುಳಿ ಯಸ್.ಯನ್. ಭಟ್, ಯಸ್.ಯನ್. ಭಟ್ ದೈಗೋಳಿ ಉಪಸ್ಥಿತರಿದ್ದರು. ಡಾ ಆನಂದ ಸಂಪನ್ಮೂಲ ವ್ಯಕ್ತಿಗಳಾಗಿ ಸಹಕರಿಸಿದರು. ಈ ಸಂದರ್ಭ ಖ್ಯಾತ ಯಕ್ಷಗಾನ ಕಲಾವಿದರಾದ ಮಹಾಬಲೇಶ್ವರ ಭಟ್ ಭಾಗಮಂಡಲ ಇವರು ಕಣ್ಣು ತಪಾಸಣೆ ಮಾಡಿ ಕಾರ್ಯಕ್ರಮವನ್ನು ಶಿಬಿರದ ಬಗ್ಗೆ ಪ್ರಶಂಶಿಸಿದರು.