HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                   ಗೋಕರ್ಣ ದೇಗುಲ ಸರಕಾರದ ವಶಕ್ಕೆ
    ಕಾರವಾರ: ಹೈಕೋಟರ್್ ಆದೇಶದಂತೆ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ಆಡಳಿತವನ್ನು ರಾಮಚಂದ್ರಾಪುರ ಮಠದ ಆಡಳಿತ ಮಂಡಳಿಯಿಂದ ದೇವಸ್ಥಾನದ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರೂ ಅಗಿರುವ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಬುಧವಾರ ವಹಿಸಿಕೊಂಡರು.
  ದೇವಸ್ಥಾನದ ಸಾಮಗ್ರಿ, ಬೆಲೆಬಾಳುವ ವಸ್ತುಗಳ ಪಟ್ಟಿಯನ್ನು ಪರಿಶೀಲನೆ ನಡೆಸಿ ಉಸ್ತುವಾರಿ ಸಮಿತಿಯ ವಶಕ್ಕೆ ಪಡೆಯಲಾಯಿತು. 2008ರಲ್ಲಿ ಸರಕಾರ ಹೊಸನಗರದ ಶ್ರೀರಾಮಚಂದ್ರಾಪುರ ಮಠಕ್ಕೆ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ಆಡಳಿತವನ್ನು ವಹಿಸಿತ್ತು. ಇದನ್ನು ವಿರೋಧಿಸಿ ಕೆಲವರು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅಜರ್ಿ ದಾಖಲಿಸಿದ್ದರು. ಹೈಕೋಟರ್್ ಆದೇಶದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನಕುಲ್ ದೇಗುಲದ ಆಡಳಿತವನ್ನು ವಶಕ್ಕೆ ಪಡೆದರು.
   ಗೋಕರ್ಣ ದೇವಾಲಯ ಕನರ್ಾಟಕ ಧಾಮರ್ಿಕ ದತ್ತಿ ಇಲಾಖೆ ಕಾಯ್ದೆ 1997ಕ್ಕೆ ಒಳಪಡುತ್ತದೆ. ಈ ಹಿನ್ನೆಲೆಯಲ್ಲಿ ಅದನ್ನು ಹಸ್ತಾಂತರ ಮಾಡಿರುವ ಕ್ರಮವನ್ನು ಪ್ರಶ್ನಿಸಿ ಹೈಕೋಟರ್್ನಲ್ಲಿ ಅಜರ್ಿ ಸಲ್ಲಿಕೆಯಾಗಿತ್ತು. ನ್ಯಾಯಮೂತರ್ಿ ಬಿ.ವಿ.ನಾಗರತ್ನ ಹಾಗೂ ಅರವಿಂದ್ ಕುಮಾರ್ ಅವರಿದ್ದ ವಿಭಾಗೀಯ ಪೀಠವು ದೇವಾಲಯವನ್ನು ಮತ್ತೆ ಸರಕಾರದ ವಶಕ್ಕೆ ನೀಡಬೇಕೆಂದು ಆದೇಶಿಸಿತ್ತು. ಈ ಸಂಬಂಧ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಅವರು ಹೈಕೋಟರ್್ ಆದೇಶದಂತೆ ದೇವಾಲಯದ ಆಡಳಿತವನ್ನು ತಮ್ಮ ನೇತೃತ್ವದ ಉಸ್ತುವಾರಿ ಸಮಿತಿ ವಹಿಸಿಕೊಂಡಿದೆ ಎಂದು ತಿಳಿಸಿದರು.
   ರಾಮಚಂದ್ರಾಪುರ ಮಠದವರಿಗೆ ನ್ಯಾಯಾಲಯದ ತೀಪರ್ಿನ ಬಗ್ಗೆ ಇರುವ ಗೊಂದಲ ತಮಗೆ ಗೊತ್ತಿಲ್ಲ. ತೀಪರ್ಿನ ಬಗ್ಗೆ ಸ್ಪಷ್ಟತೆಯಿದ್ದು ಮುಜರಾಯಿ ಆಯುಕ್ತರಿಂದ ಬಂದಿರು ಮಾರ್ಗಸೂಚಿಯಂತೆ ತಾವು ಅಧಿಕಾರ ವಹಿಸಿಕೊಂಡಿದ್ದು. ಸದ್ಯದಲ್ಲೇ ಸಮಿತಿಗೆ ಸದಸ್ಯರನ್ನು ನೇಮಿಸಿಕೊಳ್ಳಲಾಗುವುದು ಎಂದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries