HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                    ಸೆ.21 : ಕಾಸರಗೋಡು ಜಿಲ್ಲಾ ಬಂಟರ ಸಂಘದ
                  ವಿದ್ಯಾಭ್ಯಾಸ ಸಹಾಯ ಧನ ವಿತರಣೆ, ಪ್ರತಿಭಾ ಪುರಸ್ಕಾರ
     ಕುಂಬಳೆ: ಕಾಸರಗೋಡು ಜಿಲ್ಲಾ ಬಂಟರ ಸಂಘವು  ಬೆಂಗಳೂರು ಬಂಟರ ಸಂಘದ ಸಹಯೋಗದಲ್ಲಿ ನಡೆಸುವ ವಿದ್ಯಾಭ್ಯಾಸ ಸಹಾಯ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ಕನ್ನಡ ಮಾಧ್ಯಮದಲ್ಲಿಯೇ ಕಲಿತು ಉನ್ನತ ಮಟ್ಟದಲ್ಲಿ ವಿಜಯ ಗಳಿಸಿದ ಕಾಸರಗೋಡಿನ ಕನ್ನಡ ಮಾಧ್ಯಮ ವಿದ್ಯಾಥರ್ಿಗಳಿಗೆ ಡಾ.ಕಯ್ಯಾರ ಸ್ಮಾರಕ ಪ್ರತಿಭಾ ಪುರಸ್ಕಾರ ಸಮಾರಂಭ ಸೆ.21 ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಕುಂಬಳೆ ಸಿಟಿ ಹಾಲ್ನಲ್ಲಿ ನಡೆಯಲಿರುವುದು.
   ಕಾರ್ಯಕ್ರಮವನ್ನು ಬೆಂಗಳೂರು ಬಂಟರ ಸಂಘದ ನೂತನ ಅಧ್ಯಕ್ಷ ಉಪೇಂದ್ರ ಶೆಟ್ಟಿ ಅವರು ಉದ್ಘಾಟಿಸಲಿರುವರು. ಮುಂಬಯಿಯಲ್ಲಿ ಉದ್ಯಮಿಯಾಗಿರುವ ಅರಿಯಡ್ಕ ಏಳ್ನಾಡುಗುತ್ತು ಗಣೇಶ್ ರೈ ಕೋಡಿಂಗಾರ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಬೆಂಗಳೂರು ಬಂಟರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಸದಾನಂದ ಸುಲಾಯ ಹಾಗೂ ಯುರೋಪಿಯನ್ ಕಾರ್ ರ್ಯಾಲಿ ಚಾಂಪಿಯನ್ ಅಶ್ವಿನ್ ನಾಕ್ ಅತಿಥಿಗಳಾಗಿ ಭಾಗವಹಿಸುವರು.
   ಕಾಸರಗೋಡು ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ನ್ಯಾಯವಾದಿ ಸದಾನಂದ ರೈ ಅವರು ಅಧ್ಯಕ್ಷತೆ ವಹಿಸಲಿರುವ ಸಮಾರಂಭದಲ್ಲಿ ಇತ್ತೀಚೆಗೆ ನಡೆದ ಸಿ.ಎ. ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿಯೇ ಉನ್ನತ ವಿಜಯಗಳಿಸಿದ ವಿಖ್ಯಾತ್ ರೈ ಅರಿಬೈಲು, ಅನಸೂಯ ರೈ ಕಾಜೂರು ಅವರನ್ನು ಗೌರವಿಸಿ ಅಭಿನಂದಿಸಲಾಗುವುದು.
   ನಿಕಟಪೂರ್ವ ಜಿಲ್ಲಾಧ್ಯಕ್ಷ ಜಿ.ಕೆ.ಶೆಟ್ಟಿ ಬೋಳ್ನಾಡುಗುತ್ತು, ಕೆ.ದಾಸಣ್ಣ ಆಳ್ವ ಕುಳೂರುಬೀಡು, ಪದ್ಮನಾಭ ಶೆಟ್ಟಿ ವಳಮಲೆ, ಸುಬ್ಬಣ್ಣ ಶೆಟ್ಟಿ ಕುಚ್ಚಿಕ್ಕಾಡು ಶುಭಹಾರೈಸಿ ಮಾತನಾಡುವರು. ಜಿಲ್ಲಾ ಸಂಘದ ಪ್ರಧಾನ ಕಾರ್ಯದಶರ್ಿ ನ್ಯಾಯವಾದಿ ಎಂ.ದಾಮೋದರ ಶೆಟ್ಟಿ, ಉಪಾಧ್ಯಕ್ಷರುಗಳಾದ ಸದಾಶಿವ ರೈ ಬೆಳ್ಳಿಪ್ಪಾಡಿ, ಜೊತೆ ಕಾರ್ಯದಶರ್ಿಗಳಾದ ಅರವಿಂದಾಕ್ಷ ಭಂಡಾರಿ, ಶ್ಯಾಮಲಾ ಎಂ.ಶೆಟ್ಟಿ, ಕೋಶಾಧಿಕಾರಿ ಪಿ.ಜಿ.ಚಂದ್ರಹಾಸ್ ರೈ. ಕಾರ್ಯಕ್ರಮ ನಿರ್ವಹಿಸುವರು. ಭೋಜನದ ಬಳಿಕ ಗಿರೀಶ್ ರೈ ಕಕ್ಕೆಪದವು ಭಾಗವತಿಕೆಯಲ್ಲಿ ನುರಿತ ಕಲಾವಿದರಿಂದ ಯಕ್ಷಗಾನ ತಾಳಮದ್ದಲೆ ನಡೆಯಲಿರುವುದು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries