HEALTH TIPS

ಯಾವುದೇ ಶೀರ್ಷಿಕೆಯಿಲ್ಲ

             ಇನ್ನು ನಿರಾಳ-ಆಧಾರ್ ಮಾಹಿತಿ ಕಳವು ಸಂವಿಧಾನಕ್ಕೆ ವಿರುದ್ಧ; ಆಧಾರ್ ಸಿಂಧುತ್ವ ಎತ್ತಿ ಹಿಡಿದ ಸುಪ್ರೀಂ ಕೋಟರ್್
    ನವದೆಹಲಿ: ಬಹು ನಿರೀಕ್ಷಿತ ಆಧಾರ್ ಸಿಂಧುತ್ವ ಪ್ರಕರಣದ ತೀರ್ಪನ್ನು ಸುಪ್ರೀಂ ಕೋಟರ್್ ಬುಧವಾರ ನೀಡಿದ್ದು, ಆಧಾರ್ ಮೇಲಿನ ದಾಳಿ, ಸಂವಿಧಾನಕ್ಕೆ ವಿರುದ್ಧವಾದದ್ದು ಎಂದು ಹೇಳುವ ಮೂಲಕ ಆಧಾರ್ ಸಿಂಧುತ್ವವನ್ನು ಎತ್ತಿ ಹಿಡಿದಿದೆ.
     ಆಧಾರ್ ಸಿಂಧುತ್ವ ಕುರಿತಂತೆ ಸುಪ್ರೀಂ ಕೋಟರ್ಿನಲ್ಲಿ ಬುಧವಾರ ಮಹತ್ವದ ತೀಪರ್ು ಹೊರಬಿದ್ದಿದ್ದು, ಅಂತಿಮ ತೀಪರ್ಿನ ವಿವರವನ್ನು ನ್ಯಾಯಮೂತರ್ಿ ಎ ಕೆ ಸಿಕ್ರಿ ಓದಿದರು.
   'ಆಧಾರ್ ಮೇಲಿನ ದಾಳಿ ಸಂವಿಧಾನಕ್ಕೆ ವಿರುದ್ಧವಾದುದು. ಆಧಾರ್ ದತ್ತಾಂಶಗಳ ಸೋರಿಕೆ ಅಥವಾ ಅವುಗಳನ್ನು ಕದಿಯುವುದು ಸಂವಿಧಾನಕ್ಕೆ ವಿರುದ್ಧವಾದದ್ದು. ಆಧಾರ್ ಮಾಹಿತಿ ರಕ್ಷಣೆಗೆ ಕೇಂದ್ರ ಸಕರ್ಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸುಪ್ರೀಂ ಕೋಟರ್್ ಹೇಳಿದೆ.
   ಜೊತೆಗೆ ಸಮಾಜದ ಹಿತದೃಷ್ಟಿಯಿಂದ ಕೆಲವು ನಿರ್ಬಂಧಗಳು ಅಗತ್ಯ ಎಂದಿರುವ ಕೋಟರ್್, ಯೋಜನೆಗಳ ಫಲಾನುಭವಿಗಳಿಗೆ ಆಧಾರ್ ನಿಂದ ಉಪಯೋಗವಾಗುತ್ತಿದೆ' ಎಂದು ಅಭಿಪ್ರಾಯಪಟ್ಟಿದೆ. ಅಂತೆಯೇ ಆಧಾರ್ ಮಾಹಿತಿಯನ್ನು ತಿರುಚಲು ಸಾಧ್ಯವಿಲ್ಲ ಎಂದು ಹೇಳಿರುವ ಕೋಟರ್್ ನಕಲಿ ಆಧಾರ್ ಕಾಡರ್್ ಸೃಷ್ಟಿಯೂ ಸಾಧ್ಯವಿಲ್ಲ. ನಕಲಿ ಆಧಾರ್ ಕಾಡರ್್ ಸೃಷ್ಟಿಸಲು ಸಾಧ್ಯವಿದ್ದರೆ ಅದನ್ನು ತಡೆಗಟ್ಟಲು ಯತ್ನಿಸಿ ಎಂದು ಕೇಂದ್ರ ಸಕರ್ಾರಕ್ಕೆ ಸೂಚನೆ ನೀಡಿದೆ.
   ಒಟ್ಟು 40 ಪುಟಗಳ ತೀಪರ್ಿನ ಸಾರಾಂಶವನ್ನು ನ್ಯಾ.ಸಿಕ್ರಿ ಓದಿದ್ದು, 'ಖಾಸಗೀತನದ ಹಕ್ಕು ಪ್ರತಿಯೊಬ್ಬರಿಗೂ ಘನತೆಯಿಂದ ಬದುಕುವ ಹಕ್ಕನ್ನು ನೀಡಿದೆ, ಆಧಾರ್ ಸಮಾಜ ಒಂದು ವರ್ಗಕ್ಕೆ ಘನತೆಯಿಂದ ಬದುಕುವ ಮಾರ್ಗವನ್ನು ನೀಡಿದೆ  ಎಂದು ಹೇಳಿದ್ದಾರೆ.
    3 ನ್ಯಾಯಾಧೀಶರು ಪರ, ಇಬ್ಬರು ಮಾತ್ರ ವಿರೋಧ!
   ಪಂಚಸದಸ್ಯ ಪೀಠದಲ್ಲಿ ಮುಖ್ಯ ನ್ಯಾಯಮೂತರ್ಿ ದೀಪಕ್ ಮಿಶ್ರಾ, ನ್ಯಾ ಎಕೆ ಸಿಕ್ರಿ, ನ್ಯಾ.ಎ ಎಂ ಖಾನ್ ವಿಲ್ಕರ್, ನ್ಯಾ.ಡಿ ವೈ ಚಂದ್ರಚೂಡ್, ನ್ಯಾ. ಅಶೋಕ್ ಭೂಷಣ್ ಅವರಿದ್ದರು. ಆಧಾರ್ ಸಿಂಧುತ್ವಕ್ಕೆ ಸಂಬಂಧಿಸಿದಂತೆ ಐವರು ನ್ಯಾಯಮೂತರ್ಿಗಳಲ್ಲಿ ಮೂವರು ನ್ಯಾಯಮೂತರ್ಿಗಳು ಸಿಂಧುತ್ವವನ್ನು ಸ್ವಾಗತಿಸಿದ್ದರೆ, ಇನ್ನಿಬ್ಬರು ವಿರೋಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
    ಮುಖ್ಯ ನ್ಯಾಯಮೂತರ್ಿ ದೀಪಕ್ ಮಿಶ್ರಾ ನೇತೃತ್ವದ ಪಂಚಸದಸ್ಯ ಪೀಠ ಈ ಪ್ರಕರಣದ ವಿಚಾರಣೆಯನ್ನು ಕಳೆದ ಮಾಚರ್್ ತಿಂಗಳಿನಿಂದ ಆರಂಭಿಸಿತ್ತು. 12 ಅಂಕಿಗಳ ಆಧಾರ್ ಸಂಖ್ಯೆಯನ್ನು ಬಹುಮುಖ್ಯ ದಾಖಲೆಗಳೊಂದಿಗೆ ಜೋಡಿಸುವುದರಿಂದ ಖಾಸಗಿ ಮಾಹಿತಿ ಸೋರಿಕೆಯಾಗುವ ಸಂಭವವಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆದಿತ್ತು. ಖಾಸಗೀತನ ಮೂಲಭೂತ ಹಕ್ಕು ಎಂದು ಈಗಾಗಲೇ ಸುಪ್ರೀಂ ಕೋಟರ್್ ಮಹತ್ವದ ತೀಪರ್ು ನೀಡಿರುವುದು ಆಧಾರ್ ಕಡ್ಡಾಯ ಕ್ರಮದಿಂದ ಖಾಸಗೀತನಕ್ಕೆ ಧಕ್ಕೆಯಾಗುತ್ತದೆ ಎಂಬ ಆರೋಪಕ್ಕೆ ಪುಷ್ಟಿ ನೀಡಿದಂತಾಗಿತ್ತು.
   ಆಧಾರ್ ಸಿಂಧುತ್ವ ಪ್ರಶ್ನಿಸಿ ಕನರ್ಾಟಕ ಹೈಕೋಟರ್್ನ ನಿವೃತ್ತ ನ್ಯಾಯಮೂತರ್ಿ ಕೆ.ಎಸ್.ಪುಟ್ಟಸ್ವಾಮಿ ಸೇರಿದಂತೆ 24 ಮಂದಿ ಅಜರ್ಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂತರ್ಿ ದೀಪಕ್ ಮಿಶ್ರಾ ನೇತೃತ್ವದ ಸಂವಿಧಾನ ಪೀಠವು ಸುದೀರ್ಘ ಅವಧಿಯವರೆಗೆ ವಿಚಾರಣೆ ನಡೆಸಿದ್ದು, ಮೇ ತಿಂಗಳಿನಲ್ಲಿ ತೀಪರ್ು ಕಾಯ್ದಿರಿಸಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries