ಒಡಿಶಾ, ಆಂಧ್ರ ಪ್ರದೇಶಕ್ಕೆ ಚಂಡಮಾರುತದ ಎಚ್ಚರಿಕೆ
ಭುವನೇಶ್ವರ: ಭಾರತೀಯ ಹವಾಮಾನ ಇಲಾಖೆ ಗುರುವಾರ ಒಡಿಶಾ ಮತ್ತು ಆಂಧ್ರ ಪ್ರದೇಶಕ್ಕೆ ಚಂಡಮಾರುತದ ಎಚ್ಚರಿಕೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಮುಂದಿನ 12 ಗಂಟೆಗಳಲ್ಲಿ ಆಂಧ್ರ ಪ್ರದೇಶ ಮತ್ತು ಒಡಿಶಾದಲ್ಲಿ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಪೂರ್ವ ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಚಂಡಮಾರುತ ಕಳೆದ ಆರು ಗಂಟೆಗಳಿಂದ ಸುಮಾರು 15 ಕಿ.ಮೀ.ವೇಗದಲ್ಲಿ ಬೀಸುತ್ತಿದ್ದು, ಮುಂದಿನ 12 ಗಂಟೆಗಳಲ್ಲಿ ಆಂಧ್ರ ಪ್ರದೇಶ ಹಾಗೂ ಒಡಿಶಾದ ಗೋಪಾಲಪುರ್ ತಲುಪಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಈ ಚಂಡಮಾರುತದಿಂದಾಗಿ ದಕ್ಷಿಣ ಒಡಿಶಾ ಮತ್ತು ಉತ್ತರ ಆಂಧ್ರ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು ಮುಂದಿನ 24 ಗಂಟೆಗಳ ಕಾಲ ಸಮುದ್ರಗಳಿಗೆ ಇಳಿಯಬಾರದು ಎಂದೂ ಇಲಾಖೆ ಎಚ್ಚರಿಕೆ ನೀಡಿದೆ.