HEALTH TIPS

ಯಾವುದೇ ಶೀರ್ಷಿಕೆಯಿಲ್ಲ

              ವಿಶ್ವದ ಅತಿದೊಡ್ಡ ಆರೋಗ್ಯ ಸೇವೆ 'ಆಯುಷ್ಮಾನ್ ಭಾರತ್'ಗೆ ಪ್ರಧಾನಿ ಮೋದಿ ಚಾಲನೆ
    ರಾಂಚಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಕೇಂದ್ರ ಸಕರ್ಾರದ ಮಹತ್ವಾಕಾಂಕ್ಷಿ ಆಯುಷ್ಮಾನ್ ಯೋಜನೆಯನ್ನು ಭಾನುವಾರ ಉದ್ಘಾಟಿಸಿದರು. ಇದು ವಿಶ್ವದಲ್ಲಿಯೇ ಅತಿ ದೊಡ್ಡ ಸಕರ್ಾರಿ ಆರೋಗ್ಯ ಕಾರ್ಯಕ್ರಮವಾಗಿದೆ.
   ಈ ಯೋಜನೆಗೆ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ(ಎಬಿ-ಪಿಎಂಜೆಎವೈ) ಎಂದು ಮರು ನಾಮಕರಣ ಮಾಡಲಾಗಿದ್ದು ದೇಶದ 50 ಕೋಟಿಗೂ ಅಧಿಕ ಫಲಾನುಭವಿಗಳನ್ನು ಇದರಲ್ಲಿ ಒಳಗೊಳ್ಳುವುದು ಉದ್ದೇಶವಾಗಿದೆ.
    ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಡಿ ಬಿಪಿಎಲ್ ಕಾಡರ್ು ಹೊಂದಿರುವ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 5 ಲಕ್ಷದವರೆಗೆ ಸಹಾಯ ನೀಡಲಿದ್ದು ದ್ವಿತೀಯ ಮತ್ತು ತೃತೀಯ ದಜರ್ೆಯ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೌಲಭ್ಯ ನೀಡಲಾಗುತ್ತದೆ. 10.74 ಲಕ್ಷ ಕುಟುಂಬಗಳು ಇದರ ಸೌಲಭ್ಯವನ್ನು ಪಡೆಯಲಿದ್ದಾರೆ.
    ಯೋಜನೆ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ಸಕರ್ಾರಗಳು ಮತ್ತು ಆರೋಗ್ಯ ಸೇವೆ ವೃತ್ತಿಪರರು ಯೋಜನೆಯ ರಚನೆ ಮತ್ತು ಕಾರ್ಯವಿಧಾನಗಳ ಬಗ್ಗೆ ಅಧ್ಯಯನ ನಡೆಸಲಿದ್ದಾರೆ. ಅಮೆರಿಕಾ, ಕೆನಡಾ ಮತ್ತು ಮೆಕ್ಸಿಕೊ ಜನಸಂಖ್ಯೆಗಳಿಗಿಂತ ಭಾರತದಲ್ಲಿ ಆಯುಷ್ಮಾನ್ ಭಾರತ್ ಫಲಾನುಭವಿಗಳ ಸಂಖ್ಯೆ ಹೆಚ್ಚಾಗಿದೆ ಎಂದರು.
   ಜಗತ್ತಿನಾದ್ಯಂತ ವಿವಿಧ ಸಂಘಟನೆಗಳು ಆಯುಷ್ಮಾನ್ ಭಾರತ್ ಯೋಜನೆ ಕುರಿತು ಅಧ್ಯಯನ ನಡೆಸಲಿದ್ದಾರೆ. ಮುಂದಿನ ದಿನಗಳಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುವವರು ಈ ಆರೋಗ್ಯ ಸೇವೆಯನ್ನು ಆಧರಿಸಿ ಹೊಸ ಯೋಜನೆಗಳನ್ನು ಜಾರಿಗೆ ತರಲಿದ್ದಾರೆ ಎಂದು ಹೇಳಿದರು.
  ಆಯುಷ್ಮಾನ್ ಭಾರತ್ ಯೋಜನೆಯ ಸಹಾಯವಾಣಿ ಸಂಖ್ಯೆ 14555, ಜನರು ಈ ಸಂಖ್ಯೆಗೆ ಕರೆ ಮಾಡಿ ಯೋಜನೆಯ ಫಲವನ್ನು ಪಡೆದುಕೊಳ್ಳಬಹುದು. ಇದು ದೇಶದ ಬಡ ವರ್ಗದವರಿಗೆ ಆರೋಗ್ಯ ಸೌಲಭ್ಯ ಕಲ್ಪಿಸಲು ಇರುವ ಉತ್ತಮ ಯೋಜನೆಯಾಗಿದೆ ಎಂದು ಮೋದಿ ಹೇಳಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries