ನಮ್ಮ ಹೋರಾಟ ಬೆಂಗಳೂರು ವಿಧಾನಸೌಧದ ಮುಂದೆ
ಕನ್ನಡ ಹೋರಾಟ ಸಮಿತಿಯಿಂದ ಪ್ರತಿಭಟನಾ ಸತ್ಯಾಗ್ರಹ
ಕಾಸರಗೋಡು: ಭಾಷಾ ಅಲ್ಪಸಂಖ್ಯಾತ ಪ್ರದೇಶ ಕಾಸರಗೋಡಿನಲ್ಲಿ ಕನ್ನಡ ವಿದ್ಯಾಥರ್ಿಗಳು ಕಡ್ಡಾಯ ಮಲಯಾಳ ಕಲಿಯಬೇಕು, ಕನ್ನಡ ಮಾಧ್ಯಮ ಶಾಲೆಗಳಲ್ಲಿ ಕನ್ನಡ ಅರಿಯದ ಮಲಯಾಳಿ ಅಧ್ಯಾಪಕರ ನೇಮಕ ಹಾಗೂ ಇನ್ನಿತರ ಸಮಸ್ಯೆಗಳ ಪರಿಹಾರದ ಬಗ್ಗೆ ಕೇರಳ ಸರಕಾರವನ್ನು ಒತ್ತಾಯಿಸಲು ಕನ್ನಡ ಹೋರಾಟ ಸಮಿತಿಯ ನೇತೃತ್ವದಲ್ಲಿ ಬೆಂಗಳೂರು ವಿಧಾನಸೌಧದ ಮುಂಭಾಗದಲ್ಲಿ (ಬಸವೇಶ್ವರ ವೃತ್ತ) ಅ.6 ರಂದು ಬೆಳಗ್ಗೆ 10 ಗಂಟೆಯಿಂದ ಪ್ರತಿಭಟನಾ ಸತ್ಯಾಗ್ರಹ ನಡೆಯಲಿದೆ. ಕನ್ನಡ ಹೋರಾಟದ ಮುಂಚೂಣಿ ನಾಯಕ, ಕನ್ನಡ ಚಳವಳಿ ವಾಟಾಳ್ ಪಕ್ಷದ ರಾಜ್ಯಾಧ್ಯಕ್ಷ ವಾಟಾಳ್ ನಾಗರಾಜ್ ಅವರ ಮುಂದಾಳುತ್ವದಲ್ಲಿ ಬೆಂಗಳೂರಿನ ವಿವಿಧ ಕನ್ನಡ ಪರ ಸಂಘಟನೆಗಳ ಸಹಯೋಗದೊಂದಿಗೆ ಈ ಪ್ರತಿಭಟನೆ ನಡೆಯಲಿದೆ.
ಕಾಸರಗೋಡಿನಿಂದ ನೂರಾರು ಸಂಖ್ಯೆಯಲ್ಲಿ ಕನ್ನಡಿಗರು ಸತ್ಯಾಗ್ರಹದಲ್ಲಿ ಪಾಲ್ಗೊಳ್ಳಲಿದ್ದಾರೆ. ಸತ್ಯಾಗ್ರಹದ ಬಳಿಕ ಕನರ್ಾಟಕ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರಿಗೆ ಮನವಿ ಸಲ್ಲಿಸಲಾಗುವುದು.
ಪ್ರಕೃತಿ ವಿಕೋಪ ಕಾರಣದಿಂದ ಮುಂದೂಡಲ್ಪಟ್ಟ ಪ್ರತಿಭಟನಾ ಸತ್ಯಾಗ್ರಹ ಅ.6 ರಂದು ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕನ್ನಡ ಹೋರಾಟ ಸಮಿತಿ ಪದಾಧಿಕಾರಿಗಳು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.