ಕಾಸರಗೋಡು: ಜಿಲ್ಲೆಯಲ್ಲಿ ಹೆಚ್ಚಳಗೊಳ್ಳುತ್ತಿರುವ ವಾಹನ ಅಪಘಾತ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಲು ಜಿಲ್ಲಾ ರಸ್ತೆ ಸುರಕ್ಷೆ ಮಂಡಳಿ ಸಭೆ ನಿರ್ಧರಿಸಿದೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಅಧ್ಯಕ್ಷತೆ ವಹಿಸಿದ್ದರು.
ನಿಗದಿತ ಮಾದರಿಯಲ್ಲಿ ನಂಬರ್ ಪ್ಲೇಟ್ ಸ್ಥಾಪಿಸದೇ ಇರುವ, ಹೆಲ್ಮೆಟ್ ಧರಿಸದೇ ದ್ವಿಚಕ್ರವಾಹನ ಸಂಚಾರ ನಡೆಸುವ, ಅತಿವೇಗದಲ್ಲಿ ವಾಹನ ಸಂಚಾರ ನಡೆಸುವವರ ವಿರುದ್ಧ ಅಧಿಕಾರಿಗಳು ಕ್ರಮಕೈಗೊಳ್ಳಲಿದ್ದಾರೆ. ಜಿಲ್ಲಾಧಿಕಾರಿಗಳ ನೇತೃತ್ವ ದಲ್ಲಿ ಪೊಲೀಸರು-ಮೋಟಾರು ವಾಹನ ,ಕಂದಾಯ ಇಲಾಖೆಗಳ ಅಧಿಕಾರಿಗಳು ಕಾನೂನು ಕ್ರಮಕೈಗೊಳ್ಳಲಿದ್ದಾರೆ ಎಂದು ಸಭೆ ತಿಳಿಸಿದೆ. ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.