ಬದಿಯಡ್ಕ: ಬೆಂಗಳೂರಿನ ಕನ್ನಡ ಅಭಿವೃದ್ದಿ ಪ್ರಾಧಿಕಾರದ ನೇತೃತ್ವದಲ್ಲಿ ಕೇರಳ-ಗೋವಾ ರಾಜ್ಯಗಳ ವಿದ್ಯಾಥರ್ಿಗಳಿಗೆ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರಧಾನ ಸಮಾರಂಭ ಡಿ. 2 ರಂದು ಭಾನುವಾರ ಶ್ರೀಮದ್ ಎಡನೀರು ಮಠದ ಸಭಾಂಗಣದಲ್ಲಿ ಬೆಳಿಗ್ಗೆ 11 ರಿಂದ ಆಯೋಜಿಸಲಾಗಿದೆ.
ಶ್ರೀಮದ್ ಎಡನೀರು ಮಠಾಧೀಶ ಶ್ರೀಕೇಶವಾನಂದ ಭಾರತೀ ಶ್ರೀಗಳ ದಿವ್ಯ ಉಪಸ್ಥಿತಿಯಲ್ಲಿ ನಡೆಯಲಿರುವ ಸಮಾರಂಭವನ್ನು ಕನರ್ಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವೆ ಡಾ.ಜಯಮಾಲಾ ಉದ್ಘಾಟಿಸುವರು. ಶಾಸಕ ಎನ್.ಎ.ನೆಲ್ಲಿಕುನ್ನು ಅಧ್ಯಕ್ಷತೆ ವಹಿಸುವರು. ಕನ್ನಡ ಅಭಿವೃದ್ದಿ ಪ್ರಾಧಿಕಾರದಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಪ್ರಾಸ್ತಾವಿಕವಾಗಿ ಮಾತನಾಡುವರು. ರಾಜ್ಯ ಕಂದಾಯ ಸಚಿವ ಇ.ಚಂದ್ರಶೇಖರನ್ ಪ್ರಶಸ್ತಿ ಪ್ರಧಾನಗೈಯ್ಯುವರು. ಉದುಮ ಶಾಸಕ ಕುಂಞಿರಾಮನ್ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು, ಜಿಲ್ಲಾ ಪೋಲೀಸ್ ವರಿಷ್ಠ ಡಾ.ಎ.ಶ್ರೀನಿವಾಸ್, ಜಿಲ್ಲಾ ಪಂಚಾಯತು ಸದಸ್ಯ ನ್ಯಾಯವಾದಿ ಕೆ.ಶ್ರೀಕಾಂತ್, ಜಿಲ್ಲಾ ಶಿಕ್ಷಣಾಧಿಕಾರಿ ನಂದಿಕೇಶನ್, ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕ ಸಂಘದಕೇಂದ್ರ ಸಮಿತಿ ಅಧ್ಯಕ್ಷ ರವೀಂದ್ರನಾಥ ಕೆ.ಆರ್, ಶ್ರೀಮದ್ ಎಡನೀರು ಮಠದ ವ್ಯವಸ್ಥಾಪಕ ನ್ಯಾಯವಾದಿ ಐ.ವಿ.ಭಟ್ ಉಪಸ್ಥಿತರಿರುವರು. ಕನ್ನಡ ಅಭಿವೃದ್ದಿ ಪ್ರಾಧಿಕಾರದ ಸದಸ್ಯರುಗಳಾದ ರತ್ನಾಕರ ಶೆಟ್ಟಿ, ಸಿ.ಎಫ್.ನಾಯ್ಕ, ಕನರ್ಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಸದಸ್ಯ ದಾಮೋದರ ಶೆಟ್ಟಿ, ಅಖಿಲ ಗೋವಾ ಕನ್ನಡ ಸಂಘದ ಅಧ್ಯಕ್ಷ ಹನುಮಂತಪ್ಪ ಶಿರೂರು ರೆಡ್ಡಿ, ವೈ.ಆರ್.ಬೆಳಗೂರ್, ಗೋವಾ ಕನ್ನಡ ಸಂಘದ ಅಧ್ಯಕ್ಷ ಮಲ್ಲಿಕಾಜರ್ುನ ವಿ.ಬಾದಾಯಿ ಉಪಸ್ಥಿತರಿದ್ದು ಮಾತನಾಡುವರು. ಕಸಾಪ ಕೇರಳ ಗಡಿನಾಡ ಘಟಕಾಧ್ಯಕ್ಷ ಎಸ್.ವಿ.ಭಟ್ ಚೆಂಗಳ ಗ್ರಾ.ಪಂ. ಸದಸ್ಯ ಇ.ಶಾಂತಕುಮಾರಿ,ಕಾಸರಗೋಡು ಕನರ್ಾಟಕ ಸಮಿತಿ ಅಧ್ಯಕ್ಷ ನ್ಯಾಯವಾದಿ ಮುರಳೀಧರ ಬಳ್ಳುಕುರಾಯ, ಕೇರಳ ಪಾತರ್ಿಸುಬ್ಬ ಕಲಾ ಕ್ಷೇತ್ರದ ಅಧ್ಯಕ್ಷ ಜಯರಾಮ ಮಂಜತ್ತಾಯ ಎಡನೀರು, ಕೇರಳ ತುಳು ಅಕಾಡೆಮಿ ಅಧ್ಯಕ್ಷ ಎಂ.ಉಮೇಶ ಸಾಲ್ಯಾನ್ ಕಾಸರಗೋಡು, ರಂಗಚಿನ್ನಾರಿ ಕಾಸರಗೋಡಿನ ಅಧ್ಯಕ್ಷ ಕಾಸರಗೋಡು ಚಿನ್ನಾ, ಕಾಸರಗೋಡು ಸರಕಾರಿ ಕಾಲೇಜಿನ ಕನ್ನಡ ಸಂಶೋಧನಾ ವಿಭಾಗದ ಮುಖ್ಯಸ್ಥೆ ಡಾ.ಸುಜಾತಾ ಎಸ್ ಮೊದಲಾದವರು ಉಪಸ್ಥಿತರಿರುವರು.