ಪುನ:ಪ್ರತಿಷ್ಠಾ ಬಂಧ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ
0
ಡಿಸೆಂಬರ್ 03, 2018
ಮುಳ್ಳೇರಿಯ: ನೂಜಿಬೆಟ್ಟು ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರಸ್ತುತ ಜೀರ್ಣೋದ್ಧಾರಗೊಂಡು ಮುಂದಿನ ಫೆ.2 ರಿಂದ 7 ರ ವರೆಗೆ ಪುನ:ಪ್ರತಿಷ್ಠಾ ಬಂಧ ಬ್ರಹ್ಮಕಲಶೋತ್ಸವ ಜರಗಲಿರುವುದು.
ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಬಿ.ವಸಂತ ಪೈ ಬದಿಯಡ್ಕ ಅವರ ನಿರ್ದೇಶನದಂತೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ದಿವ್ಯಹಸ್ತದಿಂದ ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಮೊಕ್ತೇಸರ ಟಿ.ಆರ್.ರವೀಂದ್ರ ಆಚಾರ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸಿ.ಎಚ್.ಶಿವಪ್ಪ ಗೌಡ, ಕಾರ್ಯದರ್ಶಿ ಸತ್ಯನಾರಾಯಣ ಮನೊಳಿತ್ತಾಯ, ಕೋಶಾಧಿಕಾರಿ ಶ್ರೀಧರ ಕಾರಂತ, ಅರ್ಚಕ ವೆಂಕಟಕೃಷ್ಣ ಕಾರಂತ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷ ಕೇಶವ, ನಾರಾಯಣ ಗೌಡ, ಕಾರ್ಯದರ್ಶಿ ಕುಶಾಲಪ್ಪ ಗೌಡ ಉಪಸ್ಥಿತರಿದ್ದರು. ಪತ್ರಿಕೆ ಬಿಡುಗಡೆಗೊಳಿಸಿ ಪೂಜ್ಯರು ಕಾರ್ಯಕ್ರಮಕ್ಕೆ ಶುಭಹಾರೈಸಿದರು.