ಕನ್ನಡ ರಾಜ್ಯೋತ್ಸವ ಮತ್ತು ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಸಮಾರಂಭ ನಾಳೆ
0
ಡಿಸೆಂಬರ್ 06, 2018
ಉಪ್ಪಳ: ಕರ್ನಾಟಕ ಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕ ಹಾಗೂ ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡೆಮಿ ಕಾಸರಗೋಡು ಇವುಗಳ ಜಂಟಿ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಸಮಾರಂಭ ಡಿ.8ರಂದು ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಪರಿಸರದಲ್ಲಿ ನಡೆಯಲಿದೆ.
ಕನ್ನಡ ರಾಜ್ಯೋತ್ಸವ ಮತ್ತು ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಗಡಿನಾಡ ಕಲಾ ಸಾಂಸ್ಕøತಿಕ ಅಕಾಡೆಮಿಯ ಅಧ್ಯಕ್ಷ ಪ್ರಭಾಕರ ಕಲ್ಲೂರಾಯ ಬನದಗದ್ದೆ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸರಕಾರದ ಕುಡಿಯುವ ನೀರು ಹಾಗೂ ನೈರ್ಮಲ್ಯ ಖಾತೆಯ ಸಚಿವ ರಮೇಶ್ ಸಿ.ಜಿಗಜಿಣಗಿ ಉದ್ಘಾಟಿಸುವರು. ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರು ಉಪಸ್ಥಿತರಿದ್ದು ಆಶೀರ್ವಚನ ನೀಡಲಿರುವರು. ಕಾಸರಗೋಡು ಶಾಸಕ ಎನ್.ಎ.ನೆಲ್ಲಿಕುನ್ನು, ಕರ್ನಾಟಕ ಜಾನಪದ ಪರಿಷತ್ತು ಅಧ್ಯಕ್ಷ ಟಿ.ತಿಮ್ಮೇ ಗೌಡ ಉಪಸ್ಥಿತರಿರುವರು.
ಕೇರಳ ಜವುಳಿ ನಿಗಮದ ಅಧ್ಯಕ್ಷ ಸಿ.ಆರ್.ವಲ್ಸನ್, ಜಿಲ್ಲಾ ಪಂಚಾಯತಿ ಸದಸ್ಯ ನ್ಯಾಯವಾದಿ ಕೆ.ಶ್ರೀಕಾಂತ್, ಮಂಜೇಶ್ವರ ಬ್ಲಾ.ಪಂ. ಅಧ್ಯಕ್ಷ ಎ.ಕೆ.ಎಂ.ಅಶ್ರಫ್, ಮಂಗಳೂರಿನ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಉಪಸ್ಥಿತರಿದ್ದು ಶುಭಹಾರೈಸುವರು. ವಿಶೇಷ ಆಹ್ವಾನಿತರಾಗಿ ಮಂಗಲ್ಪಾಡಿ ಗ್ರಾ.ಪಂ. ಸ್ಥಾಯೀ ಸಮಿತಿ ಅಧ್ಯಕ್ಷ ಬಿ.ಎಂ.ಮುಸ್ತಫಾ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ಯೋಜನಾಧಿಕಾರಿ ಚೇತನಾ ಎಂ., ಉದ್ಯಮಿ ಯು.ಕೆ.ಯೂಸುಫ್ ಮೊದಲಾದವರು ಉಪಸ್ಥಿತರಿರುವರು.
ಉದ್ಘಾಟನಾ ಸಮಾರಂಭದ ಬಳಿಕ ಕವಿ, ಪತ್ರಕರ್ತ ಕೆ.ರಾಧಾಕೃಷ್ಣ ಉಳಿಯತ್ತಡ್ಕ ಅವರ ಅಧ್ಯಕ್ಷತೆಯಲ್ಲಿ ಬಹುಭಾಷಾ ಕವಿಗೋಷ್ಠಿ ನಡೆಯಲಿದೆ. ಆ ಬಳಿಕ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಪ್ರಾಯೋಕತ್ವದಲ್ಲಿ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದ್ದು,ನಿವೃತ್ತ ಉಪ ಜಿಲ್ಲಾಧಿಕಾರಿ ಬಾಲಕೃಷ್ಣ ಅಗ್ಗಿತ್ತಾಯ ಮಧೂರು, ಶ್ರೀ ಕಾಂತ್ ನಾರಾಯಣ್ ನೆಟ್ಟಣಿಗೆ, ಸಂಧ್ಯಾಗೀತಾ ಬಾಯಾರು, ವಿದ್ಯಾಗಣೇಶ್ ಅಣಂಗೂರು ನಿರ್ವಹಿಸುವರು.
ಈ ಸಂದರ್ಭ ಸಾಮಾಜಿಕ ಹಸಿರು ಅರಿವಿನ ರೂವಾರಿ ನಾಡೋಜ ಸಾಲುಮರದ ತಿಮ್ಮಕ್ಕ, ದೀನಬಂಧು ಸಾಯಿರಾಂ ಗೋಪಾಲಕೃಷ್ಣ ಭಟ್, ಹಿರಿಯ ಪತ್ರಕರ್ತ, ಕವಿ-ಸಾಹಿತಿ ಮಲಾರು ಜಯರಾಮ ರೈ, ಶಾ.ಮಂ.ಕೃಷ್ಣರಾಯ, ಜಾನಪದ ಕಲಾವಿದ ಕುಟ್ಟಿ ಬಜಕ್ಕೂಡ್ಲು, ಮುನಿಯಾಲು ಉದಯ ಶೆಟ್ಟಿ, ಸಂಕೀರ್ತನಕಾರ ಜಯಾನಂದಕುಮಾರ್ ಹೊಸದುರ್ಗ, ತೋನ್ಸೆ ವಿಜಯಕುಮಾರ್ ಶೆಟ್ಟಿ, ಎಸ್.ಜಗದೀಶ್ಚಂದ್ರ ಅಂಚನ್, ಮೊಹಮ್ಮದ್ ಆಸೀಫ್ ಸವಣೂರು, ಮಡಿಕೇರಿ ಸುಳ್ಳಿಮಾಡದ ಗೌರಿ ನಂಜಪ್ಪ ಅವರುಗಳನ್ನು ಗೌರವಿಸಲಾಗುವುದು ಎಂದು ಕರ್ನಾಟಕ ಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.