ಜಿ ವೆಂಕಟಸುಬ್ಬಯ್ಯ, ನಾಗರಾಜಪ್ಪ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
0
ಡಿಸೆಂಬರ್ 06, 2018
ನವದೆಹಲಿ: ಕನ್ನಡದ ಖ್ಯಾತ ಸಂಶೋಧಕ, ಭಾಷಾ ತಜ್ಞ ಜಿ. ವೆಂಕಟಸುಬ್ಬಯ್ಯನವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಭಾಷಾ ಸಮ್ಮಾನ್ ಪ್ರಶಸ್ತಿ ಘೋಶಿಸಲಾಗಿದೆ. ಇನ್ನೋರ್ವ ಸೃಜನಶೀಲ ಲೇಖಕ ಕೆ.ಜಿ ನಾಗರಾಜಪ್ಪ ಅವರ ಚಿಂತನಶೀಲ ಬರಹ ಮಾಲಿಕೆ `ಅನುಶ್ರೇಣಿ ಯಜಮಾನಿಕೆ' ಪುಸ್ತಕಕ್ಕೆ 2018ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಘೋಶಿಸಲ್ಪಟ್ಟಿದೆ.
2016-17ನೇ ಸಾಲಿನ ಭಾಷಾ ಸಮ್ಮಾನ್ ಪುರಸ್ಕಾರಕ್ಕೆ ವೆಂಕಟಸುಬ್ಬಯ್ಯ ಆಯ್ಕೆಯಾಗಿದ್ದಾರೆ. ಎರಡೂ ಪ್ರಶಸ್ತಿಯು ಒಂದು ಲಕ್ಷ ನಗದು ಹಾಗೂ ಸ್ಮರಣಿಕೆ ಹೊಂದಿರಲಿದೆ.
ಕೇಂದ್ರ ಸಾಹಿತ್ಯ ಅಕಾಡಮಿ ಅಧ್ಯಕ್ಷ ಚಂದ್ರಶೇಖರ್ ಕಂಬಾರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿವಿಧ ಭಾಷೆಗಳ ಒಟ್ಟು 24 ಪುಸ್ತಕಗಳಿಗೆ ಪ್ರಶಸ್ತಿ ಘೋಷಿಸಲಾಗಿದೆ.
2019ರ ಜನವರಿ 29ರಂದು ದೆಹಲಿಯಲ್ಲಿ ಪ್ರಶಸ್ತಿ ವಿತರಣೆ ಸಮಾರಂಭ ನಡೆಯಲಿದೆ.