ಮೀಯಪದವಿನಲ್ಲಿ ವಿಶ್ವ ಏಡ್ಸ್ ದಿನಾಚರಣೆ
0
ಡಿಸೆಂಬರ್ 03, 2018
ಮಂಜೇಶ್ವರ: ಮೀಯಪದವು ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯಲ್ಲಿ ವಿಶ್ವ ಏಡ್ಸ್ ದಿನದ ಪ್ರಯುಕ್ತ ರ್ಯಾಲಿ ನಡೆಯಿತು.
ಮೀಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪ್ರಭಾಕರ ರೈ ಅವರ ನೇತೃತ್ವದಲ್ಲಿ ಕಾರ್ಯಕ್ರಮವು ಜರಗಿತು. ರ್ಯಾಲಿಯ ಬಳಿಕ ಅವರು ವಿದ್ಯಾರ್ಥಿಗಳಿಗೆ ಏಡ್ಸಿನ ಕುರಿತಾದ ಸಂಕ್ಷಿಪ್ತ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಮೀಂಜ ಗ್ರಾಮ ಪಂಚಾಯತಿ ಸ್ಥಾಯೀ ಸಮಿತಿ ಅಧ್ಯಕ್ಷ ಮೊಹಮ್ಮದ್ ಕುಂಞÂ, ಮೀಂಜ ಗ್ರಾಮ ಪಂಚಾಯತಿ ಅಧ್ಯಕ್ಷೆ ಶಂಶಾದ್ ಶುಕೂರು, ಹಿರಿಯ ಅಧ್ಯಾಪಕ ಶಿವಶಂಕರ ಭಟ್, ಮೀಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದರು.