ಬದಿಯಡ್ಕ: ನೀರ್ಚಾಲು ಸಮೀಪದ ಕುಂಟಿಕಾನ ಮಠ ಶ್ರೀಶಂಕರನಾರಾಯಣ ದೇವಾಲಯದಲ್ಲಿ ವಾರ್ಷಿಕ ಮಂಡಲ ಪೂಜಾ ಮಹೋತ್ಸವ ಧನುರ್ಮಾಸ 18 ಜ. 3 ರಂದು ಗುರುವಾರ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಕಾರ್ಯಕ್ರಮದ ಅಂಗವಾಗಿ ಜ.3 ರಂದು ಬೆಳಿಗ್ಗೆ 7.30ಕ್ಕೆ ಬೆಳಗ್ಗಿನ ಪೂಜೆ, 9 ರಿಂದ ಶತರುದ್ರಾಭಿಷೇಕ, 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.
ಸಾಂಸ್ಕøತಿಕ ಕಾರ್ಯಕ್ರಮ ಅಂಗವಾಗಿ ಬೆಳಿಗ್ಗೆ 11 ರಿಂದ ಬದಿಯಡ್ಕದ ಶ್ರೀಕೊರತ್ತಿ ಬಂಟ್ಸ್ ಮಹಿಳಾ ಭಜನಾ ಮಮಡಳಿಯವರಿಂದ ಭಜನಾ ಸಂಕೀರ್ತನೆ ನಡೆಯಲಿದೆ. ಭಗವದ್ಬಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬಹುದೆಂದು ಕ್ಷೇತ್ರದಪ್ರಕಟಣೆಯಲ್ಲಿ ವಿನಂತಿಸಲಾಗಿದೆ.