ನವದೆಹಲಿ: ಮುಸ್ಲಿಂ ಮಹಿಳೆಯರ ವಿವಾಹ ಹಕ್ಕು ರಕ್ಷಣೆಗೆ ಒತ್ತು ನೀಡುವ ತ್ರಿವಳಿ ತಲಾಖ್ ಮಸೂದೆಯನ್ನು ಇಂದು(ಸೋಮವಾg)À ರಾಜ್ಯಸಭೆಯಲ್ಲಿ ಮಂಡಿಸಲಾಗುತ್ತಿದ್ದು, ಇದಕ್ಕೆ ವಿರೋಧ ವ್ಯಕ್ತಪಡಿಸುವುದಾಗಿ ಕಾಂಗ್ರೆಸ್ ತಿಳಿಸಿದೆ.
ಈಗಾಗಲೇ ಲೋಕಸಭೆಯಲ್ಲಿ ಅಂಗೀಕಾರವಾಗಿರುವ ತ್ರಿವಳಿ ತಲಾಖ್ ಮಸೂದೆಯನ್ನು ಇಂದು ರಾಜ್ಯಸಭೆಯಲ್ಲಿ ಸರ್ಕಾರ ಮಂಡಿಸುತ್ತಿದ್ದು, ಎಲ್ಲರೂ ಸದನದಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಬಿಜೆಪಿ ವಿಪ್ ಜಾರಿ ಮಾಡಿದೆ.
ತ್ರಿವಳಿ ತಲಾಖ್ ಮಸೂದೆಗೆ ಕೆಲವು ತಿದ್ದುಪಡಿ ತರಬೇಕು. ಈಗ ಇರುವ ಸ್ಥಿತಿಯಲ್ಲಿಯೇ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಲು ನಾನು ಅವಕಾಶ ನೀಡುವುದಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಹೇಳಿದ್ದಾರೆ.
ಕಳೆದ ಗುರುವಾರ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಲೋಕಸಭೆಯಲ್ಲಿ ತ್ರಿವಳಿ ತಲಾಕ್ ಮಸೂದೆಯನ್ನು ಮಂಡಿಸಿದ್ದರು. ಸುದೀರ್ಘ ಚರ್ಚೆಯ ನಂತರ ವಿಧೇಯಕವನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಗಿತ್ತು.
ತ್ರಿವಳಿ ತಲಾಖೆ ಮಸೂದೆಯಲ್ಲಿ ಕೆಲವು ಅಂಶಗಳು ಅಸಾಂವಿಧಾನಿಕವಾಗಿವೆ. ಈ ಕರಡು ಕಾನೂನನ್ನು ಇನ್ನಷ್ಟು ಆಳವಾಗಿ ಅವಲೋಕಿಸಬೇಕಾದ ಅಗತ್ಯವಿದೆ. ಹೀಗಾಗಿ ಮುಸ್ಲಿಂ ಮಹಿಳೆಯರ ವೈವಾಹಿಕ ಹಕ್ಕುಗಳ ರಕ್ಷಣೆ ಮಸೂದೆ (ತ್ರಿವಳಿ ತಲಾಕ್ ಮಸೂದೆ) ಯನ್ನು ಎರಡೂ ಸದನಗಳ ಜಂಟಿ ಆಯ್ಕೆ ಸಮಿತಿಗೆ ಉಲ್ಲೇಖಿಸಬೇಕು. ಇದರಲ್ಲಿ ಒಳಗೊಂಡಿರುವ ಅಸಾಂವಿಧಾನಿಕ ಅಂಶಗಳನ್ನು ಮತ್ತೊಮ್ಮೆ ಅವಲೋಕಿಸಬೇಕೆಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದರು.