HEALTH TIPS

ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗಕ್ಕೆ ಶೇ.10 ರಷ್ಟು ಮೀಸಲಾತಿ: ಚುನಾವಣೆಗೆ ಮೋದಿ ಮಾಸ್ಟರ್ ಸ್ಟ್ರೋಕ್!

         
        ನವದೆಹಲಿ: ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಜನತೆಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ.10 ರಷ್ಟು ಮೀಸಲಾತಿ ನೀಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ನಿನ್ನೆ ಒಪ್ಪಿಗೆ ನೀಡಿದೆ.
     ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.  ಈ ನಿರ್ಣಯದಿಂದ ಮೋದಿ ಸರ್ಕಾರ ಮುಂದಿನ ದಿನಗಳಲ್ಲಿ ಮೇಲ್ವರ್ಗದ ಜನತೆಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ.10 ರಷ್ಟು ಮೀಸಲಾತಿ ನೀಡಲು ಕಾನೂನಿಗೆ ತಿದ್ದುಪಡಿ ತರಲಿದೆ.
ಮೋದಿ ಸರ್ಕಾರದ ಈ ನಿರ್ಣಯದಿಂದ ಇನ್ನು ಮುಂದಿನ ದಿನಗಳಲ್ಲಿ ಎಸ್ ಸಿ, ಎಸ್ ಟಿ ಹೊರತಾಗಿ, ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗವರಿಗೂ ಮೀಸಲಾತಿ ಸಿಗಲಿದೆ. 2019 ರ ಲೋಕಸಭಾ ಚುನಾವಣೆ ದೃಷ್ಟಿಯಿಂದ ಮೋದಿ ಸರ್ಕಾರ ನಿರ್ಣಯ ಮಹತ್ವ ಪಡೆದುಕೊಂಡಿದ್ದು ಈ ನಡೆಯನ್ನು ಸಾಮಾನ್ಯವರ್ಗದ ಜನತೆಯ ಮತ ಗಳಿಸಲು ರೂಪಿಸಿರುವ ಮಾಸ್ಟ್ರರ್ ಸ್ಟ್ರೋಕ್ ಎಂದೇ ವಿಶ್ಲೇಷಿಸಲಾಗುತ್ತಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries