ಮಂಜೇಶ್ವರ: ರಾಜ್ಯ ಸರಕಾರ ಒಂದು ಸಾವಿರ ದಿನ ಪೂರೈಸಿದ ಅಂಗವಾಗಿ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ಈ ಸಂಬಂಧ ಸಂಘಟಕ ಸಮಿತಿ ರಚನೆ ಸಭೆ ಹಲವೆಡೆ ನಡೆಯುತ್ತಿವೆ.
ಮಂಜೇಶ್ವರ ವಿಧಾನಸಭೆ ಕ್ಷೇತ್ರ ಮಟ್ಟದ ಫೆ.4ರಂದು ಮಧ್ಯಾಹ್ನ 2 ಗಂಟೆಗೆ ಹೊಸಂಗಡಿ ಹಿಲ್ ಸೈಡ್ ಸಭಾಂಗಣದಲ್ಲಿ ನಡೆಯಲಿದೆ. ಜಿಲ್ಲಾಡಳಿತೆ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಪ್ರಧಾನ ಸಮಿತಿ ಮತ್ತು ಕಾರ್ಯಕ್ರಮಗಳಿಗೆ ಸಂಬಂಧಿಸಿ ವಿವಿಧ ಉಪಸಮಿತಿಗಳ ರಚನೆ ನಡೆಯಲಿದೆ. ಜನಪ್ರತಿನಿಧಿಗಳು, ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಸರಕಾರಿ ಸಿಬ್ಬಂದಿ, ಸಾಮಾಜಿಕ ಕಾರ್ಯಕರ್ತರು, ಸಾರ್ವಜನಿಕರು ಮೊದಲಾದವರು ಭಾಗವಹಿಸುವಂತೆ ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ತಿಳಿಸಿರುವರು.