ಬದಿಯಡ್ಕ: ಕರ್ನಾಟಕ ಸರಕಾರದ ಕನ್ನಡ ಪುಸ್ತಕ ಪ್ರಾಧಿಕಾರ ಮತ್ತು ಬದಿಯಡ್ಕದ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆ ಇವುಗಳ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗುವ ತಿಂಗಳ ಸರಣಿ ಕಾರ್ಯಕ್ರಮ ಕನ್ನಡ ಸಾಹಿತ್ಯ ಸಿರಿಯ 7ನೇ ಕಾರ್ಯಕ್ರಮ ಇಂದು ಅಪರಾಹ್ನ 3.30 ರಿಂದ ಬದಿಯಡ್ಕದ ನವಜೀವನ ಶಾಲಾ ಪರಿಸರದ ಶ್ರೀರಾಮ ಯೋಗ ಕೇಂದ್ರದಲ್ಲಿ ನಡೆಯಲಿದೆ.
ಕನ್ನಡ ಸಾಹಿತ್ಯ ಸಿರಿಯ ಅಧ್ಯಕ್ಷ ಮೊಹಮ್ಮದಾಲಿ ಪೆರ್ಲ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ನಿವೃತ್ತ ಮುಖ್ಯೋಪಾಧ್ಯಾಯ ಎಂ.ನಾರಾಯಣ ಗಟ್ಟಿ ಕುಂಬಳೆ ಉದ್ಘಾಟಿಸುವರು. ಸಮಾರಂಭದಲ್ಲಿ ಹಿರಿಯ ತುಳು ಪಾಡ್ದನ ಕಲಾವಿದೆ ಚನಿಯಾರು ಚೆನ್ನಾರಕಟ್ಟೆ ಅವರನ್ನು ಸನ್ಮಾನಿಸಲಾಗುವುದು. ಮಧುರೈ ಕಾಮರಾಜ ವಿವಿಯ ನಿವೃತ್ತ ಕನ್ನಡ ವಿಭಾಗ ಮುಖ್ಯಸ್ಥ ಡಾ.ಹರಿಕೃಷ್ಣ ಭರಣ್ಯ ಅಭಿನಂದಿಸುವರು. ಬದಿಯಡ್ಕದ ಅಂಬೇಡ್ಕರ್ ವಿಚಾರ ವೇದಿಕೆಯ ಅಧ್ಯಕ್ಷ ರಾಮ ಪಟ್ಟಾಜೆ ಅಭಿನಂದನಾ ಭಾಷಣಗೈದು ಮಾತನಾಡುವರು. ನಿವೃತ್ತ ಮುಖ್ಯೋಪಾಧ್ಯಾಯ ಎನ್.ಸುಧಾಕರ ಉಪ್ಪಳ ಅವರು ನೇತಾಜಿ ಸುಭಾಶ್ಚಂದ್ರ ಬೋಸ್ ಅವರ ಜಯಂತಿಯ ಬಗ್ಗೆ ವಿಶೇಷೋಪನ್ಯಾಸ ನೀಡುವರು. ಕರ್ನಾಟಕ ಸರಕಾರದ ಕನ್ನಡ ಜಾಗೃತಿ ಸಮಿತಿ ಸದಸ್ಯ ಎ.ಆರ್.ಸುಬ್ಬಯ್ಯಕಟ್ಟೆ, ಪತ್ರಕರ್ತ ರಾಧಾಕೃಷ್ಣ ಕೆ.ಉಳಿಯತ್ತಡ್ಕ ಶುಭಾಶಂಸನೆಗೈಯ್ಯುವರು. ಪ್ರೊ.ಎ.ಶ್ರೀನಾಥ್, ಡಾ.ಬೇ.ಸಿ.ಗೋಪಾಲಕೃಷ್ಣ, ಕೇಳು ಮಾಸ್ತರ್ ಅಗಲ್ಪಾಡಿ ಮೊದಲಾದವರು ಉಪಸ್ಥಿತರಿರುವರು.