ಬದಿಯಡ್ಕ: ನೀರ್ಚಾಲು ಸಮೀಪದ ಕುಕ್ಕಂಗೋಡ್ಲು ಶ್ರೀ ಕಂಠಪಾಡಿ ಶ್ರೀ ಸುಬ್ರಹ್ಮಣ್ಯ ಸ್ವಾಮೀ ದೇವಸ್ಥಾನ ಜೀರ್ಣೋದ್ದಾರ ಗೊಳ್ಳುತಿದ್ದು ಸುತ್ತು ಗೋಪುರದ ಕೆಲಸಗಳು ಅಂತಿಮ ಹಂತದಲ್ಲಿದೆ.
ಕ್ಷೇತ್ರದ ಜೀರ್ಣೋದ್ದಾರ ಸಂಬಂಧಿ ಎಲ್ಲಾ ಕೆಲಸಗಳು ಅತೀ ಶೀಘ್ರ ನಡೆಯುವ ಸಲುವಾಗಿ ದೇಲಂಪಾಡಿ ಬಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಜ. 25 ರಂದು ಶುಕ್ರವಾರ ಬೆಳಿಗ್ಗೆ 8 ಕ್ಕೆ ಗಣಪತಿ ಹವನ ಮತ್ತು ರಾತ್ರಿ 8 ಕ್ಕೆ ಸಾಮೂಹಿಕ ಪ್ರಾರ್ಥನೆ ಯೊಂದಿಗೆ ದುರ್ಗಾಪೂಜೆ, ಸುಬ್ರಹ್ಮಣ್ಯ ದೇವರಿಗೆ ವಿಶೇಷ ಕಾರ್ತಿಕ ಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಲಿದೆ. ಭಕ್ತ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮುಂದಿನ ಜೀರ್ಣೋದ್ದಾರ ಕಾರ್ಯದಲ್ಲಿ ಸಂಪೂರ್ಣ ಸರಕರಿಸಬೇಕೆಂದು ದೇವಾಲಯದ ಸಂಬಂಧಪಟ್ಟವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.