ಸಿಡ್ನಿ: ಕ್ರಿಕೆಟ್ ಗೆ ನೀಡಿದ ಕೊಡುಗೆಯನ್ನು ಗೌರವಿಸಿ ಸಿಡ್ನಿ ಕ್ರಿಕೆಟ್ ಕ್ರೀಡಾಂಗಣ(ಎಸ್‍ಸಿಜಿ) ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಪ್ರಧಾನ ಕೋಚ್ ರವಿಶಾಸ್ತ್ರಿಗೆ ಎಸ್‍ಸಿಜಿ ಸದಸ್ಯತ್ವದ ಗೌರವವನ್ನು ನೀಡಲಾಗಿದೆ.
71 ವರ್ಷಗಳ ಬಳಿಕ ಆಸ್ಟ್ರೇಲಿಯಾ ನೆಲದಲ್ಲಿ ಟೀಂ ಇಂಡಿಯಾ ಟೆಸ್ಟ್ ಸರಣಿಯನ್ನು ಗೆಲ್ಲುವ ಮೂಲಕ ಐತಿಹಾಸಕ ಸಾಧನೆ ಮಾಡಿತ್ತು. ಈ ಸಾಧನೆ ಹಿನ್ನಲೆ ಎಸ್‍ಸಿಜಿ ಮುಖ್ಯಸ್ಥ ಟೋನಿ ಶೆಫರ್ಡ್ ಅವರು ಕೊಹ್ಲಿ ಮತ್ತು ರವಿಶಾಸ್ತ್ರಿಗೆ ಸದಸ್ಯತ್ವ ನೀಡಿ ಗೌರವಿಸಿದರು.
ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಹಾಗೂ ವೆಸ್ಟ್ ಇಂಡೀಸ್ ತಂಡದ ಮಾಜಿ ಆಟಗಾರ ಬ್ರಿಯಾನ್ ಲಾರಾ ಬಳಿಕ ಇದೀಗ ವಿರಾಟ್ ಕೊಹ್ಲಿ ಹಾಗೂ ರವಿಶಾಸ್ತ್ರಿ ಈ ಗೌರವಕ್ಕೆ ಭಾಜನರಾಗಿದ್ದಾರೆ.