ಬದಿಯಡ್ಕ: ನಾರಂಪಾಡಿ ಅನ್ನಪೂರ್ಣ ಸರ್ಕಲ್ - ಕುರುಮುಜ್ಜಿ ಕಟ್ಟೆ ಶ್ರೀ ಧರ್ಮಶಾಸ್ತಾ ಭಜನಾ ಮಂದಿರದಲ್ಲಿ ಜನವರಿ 14 (ಇಂದು) ಮಕರ ಸಂಕ್ರಮಣ ದಿನ ವಿಶೇಷ ಪೂಜಾ ಕಾರ್ಯಕ್ರಮಗಳು ಜರಗಲಿರುವುದು. ಸಾಯಂಕಾಲ ಶಬರಿಮಲೆಯಲ್ಲಿ ಜ್ಯೋತಿ ದರ್ಶನದ ವೇಳೆ ಶ್ರೀ ದೇವರಿಗೆ ವಿಶೇಷ ಪೂಜೆ ನೆರವೇರಿಸಲಾಗುವುದು.
ತದನಂತರ ಭಕ್ತಾದಿಗಳಿಂದ ಭಜನೆ, ಮಹಾ ಮಂಗಳಾರತಿ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಲಿರುವುದು. ಪ್ರಸ್ತುತ ಕಾರ್ಯಕ್ರಮದಲ್ಲಿ ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಗಳಾಗಿ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ಸಂಬಂಧಪಟ್ಟವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.