HEALTH TIPS

ಜಿಲ್ಲಾ ಸಾಹಿತ್ಯ ಸಮ್ಮೇಳನ : ಡಾ.ಪಿ.ಶ್ರೀಕೃಷ್ಣ ಭಟ್ ಅಧ್ಯಕ್ಷ


            ಬದಿಯಡ್ಕ: ಕನ್ನಡ ಸಾಹಿತ್ಯ ಪರಿಷತ್ ಕೇರಳ  ಘಟಕದ ಆಶ್ರಯದಲ್ಲಿ 12ನೆಯ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ನೀರ್ಚಾಲ್‍ನ ಮಹಾಜನ ಸಂಸ್ಕøತ ಕಾಲೇಜು ಹೈಯರ್ ಸೆಕೆಂಡರಿ ಶಾಲಾ ವಠಾರದಲ್ಲಿ  ಜ.19 ಹಾಗೂ ಜ.20ರಂದು ಜರಗಲಿದೆ. ಈ ಹಿನ್ನಲೆಯಲ್ಲಿ ಸಮ್ಮೇಳನದ ಅಧ್ಯಕ್ಷರಾಗಿ ಖ್ಯಾತ ಕನ್ನಡ ಸಾಹಿತಿ, ಹಿರಿಯ ವಿದ್ವಾಂಸ, ವಿಶ್ರಾಂತ ಪ್ರಾಧ್ಯಾಪಕ ಡಾ.ಪಿ.ಶ್ರೀಕೃಷ್ಣ ಭಟ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷ ಎಸ್.ವಿ.ಭಟ್ ತಿಳಿಸಿದ್ದಾರೆ.
          ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಸಮ್ಮೇಳನದ ಅಧ್ಯಕ್ಷರನ್ನು ಭೇಟಿಯಾಗಿ ಅಧಿಕೃತ ಆಮಂತ್ರಣ ನೀಡಲಾಯಿತು. ಈ ವೇಳೆ ಕನ್ನಡ ಸಾಹಿತ್ಯ ಪರಿಷತ್‍ನ ಗೌರವ ಕಾರ್ಯದರ್ಶಿ ಎಂ.ಎಸ್.ನವೀನ್‍ಚಂದ್ರ ಮಾಸ್ತರ್ ಮಾನ್ಯ ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries