ಜಮ್ಮು: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಅನುಮಾನಾಸ್ಪದ ಓಡಾಟಗಳು ಕಂಡು ಬಂದ ಹಿನ್ನಲೆಯಲ್ಲಿ ಭಾರತೀಯ ಸೇನಾ ಪಡೆಗಳು ಭಾನುವಾರ ರಾತ್ರಿಯಿಂದ ಭಾರೀ ಕಾರ್ಯಾಚರಣೆ ನಡೆಸುತ್ತಿವೆ ಎಂದು ತಿಳಿದುಬಂದಿದೆ.
ಸಾಂಬಾ ಜಿಲ್ಲೆಯ ರಾಮ್ಗರ್ಹ್ ಸೆಕ್ಟರ್ ಬಳಿಯಿರುವ ಅಂತರಾಷ್ಟ್ರೀಯ ಗಡಿ ರೇಖೆ ಬಳಿ ಶಂಕಿತ ವ್ಯಕ್ತಿಗಳಿಂದ ಅನುಮಾನಾಸ್ಪದ ಓಡಾಟಗಳು ಕಂಡು ಬಂದಿತ್ತು. ಈ ವೇಳೆ ಸೇನಾಪಡೆಗಳು ಕೆಲ ಸುತ್ತು ಗುಂಡುಗಳನ್ನು ಹಾರಿಸಿವೆ ಎಂದು ವರದಿಗಳು ತಿಳಿಸಿವೆ.
ಅನುಮಾನಾಸ್ಪದ ಓಡಾಟಗಳು ಕಂಡಬಂದ ಹಿನ್ನಲೆಯಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಲು ಆರಂಭಿಸಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.