HEALTH TIPS

ಕುಳೂರು ಶಾಲೆಯಲ್ಲಿ ಸಂಸದರಿಂದ ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್ ನ ಉದ್ಘಾಟನೆ


        ಮಂಜೇಶ್ವರ: ಕುಳೂರಿನಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಲೋಕಸಭಾ ಸದಸ್ಯರ ಅನುದಾನ ನಿಧಿಯಿಂದ ದೊರೆತ ಕಂಪ್ಯೂಟರ್ ಹಾಗೂ ಪ್ರೊಜೆಕ್ಟರನ್ನು ಸಂಸದ ಪಿ. ಕರುಣಾಕರನ್ ರವರು ಇತ್ತೀಚೆಗೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮಾಹಿತಿ ತಂತ್ರಜ್ಞಾನವನ್ನು ಮಕ್ಕಳಲ್ಲಿ ಇನ್ನಷ್ಟು ಬಲಗೊಳಿಸಲು ಸಾರ್ವಜನಿಕ ಶಿಕ್ಷಣ ಸಂಸ್ಥೆಗಳಿಗೆ ಕಂಪ್ಯೂಟರ್ ಹಾಗೂ ಪ್ರಾಜೆಕ್ಟ್ ಗಳನ್ನು ನೀಡುವುದರ ಮೂಲಕ ಶಿಕ್ಷಣ ಸಂಸ್ಥೆಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ ಎಂದರು.
     ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾ.ಪಂ. ಸದಸ್ಯೆ ಚಂದ್ರಾವತಿ ವಿ. ಪಿ ವಹಿಸಿದ್ದರು. ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಪ್ರಮೋದ್ ಶೆಟ್ಟಿ ಸಾಲೆದಪಡ್ಪು, ಮಾತೃ ಸಂಘದ ಅಧ್ಯಕ್ಷೆ ಆಶಾಲತ ಕುಳೂರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಕಂಚಿಲ, ಶಾಲಾಭಿವೃದ್ಧಿ ಸಮಿತಿ ಸದಸ್ಯ ಚಂದ್ರಹಾಸ ಶೆಟ್ಟಿ ಕುಳೂರು ಕನ್ಯಾನ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸಂಸದರನ್ನು ಶಾಲಾ ವತಿಯಿಂದ ಗೌರವಿಸಿ, ಅಭಿನಂದಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ಸ್ವಾಗತಿಸಿ, ಶಿಕ್ಷಕಿ ಸೌಮ್ಯ ಪಿ ವಂದಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries