ಕಾಸರಗೋಡು: ರಾಜ್ಯ ಯುವಜನ ಕಲ್ಯಾಣ ಮಂಡಳಿ, ಜಿಲ್ಲಾ ಯುವಜನ ಕೇಂದ್ರ ಜಂಟಿಯಾಗಿ ನಡೆಸುವ ಯುವಜನ ದಿನಾಚರಣೆ ಅಂಗವಾಗಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಜ.7ರಂದು ಬೆಳಗ್ಗೆ 10 ಗಂಟೆಗೆ `ವಿವೇಕಾನಂದ ದರ್ಶನ ಮತ್ತು ವರ್ತಮಾನ ಕಾಲ' ಎಂಬ ವಿಷಯದಲ್ಲಿ ರಸಪ್ರಶ್ನೆ ಸ್ಪರ್ಧೆಯು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರಗಲಿದೆ.
ಜಿಲ್ಲೆಯ ಪ್ರತಿ ಕಾಲೇಜಿನಿಂದ ಒಂದು ತಂಡದಲ್ಲಿ ಇಬ್ಬರಂತೆ ಭಾಗವಹಿಸಬಹುದು. ಪ್ರಥಮ ಸ್ಥಾನಕ್ಕೆ 3,000 ರೂ., ದ್ವಿತೀಯ ಬಹುಮಾನ 2,000 ರೂ. ಹಾಗೂ ತೃತೀಯ ಸ್ಥಾನಕ್ಕೆ 1,000 ರೂ. ಬಹುಮಾನ ನೀಡಲಾಗುವುದು. ಸ್ಪರ್ಧೆಯಲ್ಲಿ ವಿಜೇತರಾದವರು ಜ.12ರಂದು ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 9947603420, 04994 - 256219 ಸಂಪರ್ಕಿಸಬಹುದು.