ಕುಂಬಳೆ: ಕಾಸರಗೋಡು ಜಿಲ್ಲೆಯ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಕನ್ನಡ ಬಾರದ ಶಿಕ್ಷಕರ ನೇಮಕಾತಿ ವಿರುದ್ಧ, ಮಕ್ಕಳ ಶಿಕ್ಷಣ ಹಕ್ಕುಗಳ ನಿಷೇಧ ನೀತಿಯನ್ನು ಖಂಡಿಸಿ ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ನಿಯೋಗವು
ಕೇರಳ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಶ್ರೀಲಾ ಮೆನೋನ್ ರನ್ನು ಇತ್ತೀಚೆಗೆ ಭೇಟಿಯಾಗಿ ಕಾಸರಗೋಡಿನ ಕನ್ನಡ ಮಾಧ್ಯಮ ಶಾಲೆಗಳನ್ನೂ , ಇಲ್ಲಿನ ಸ್ಥಿತಿಗತಿಗಳನ್ನು ಮನವರಿಕೆ ಮಾಡಲಾಯಿತು. ಜೊತೆಗೆ ಮನವಿಯನ್ನು ನೀಡಲಾಯಿತು.
ಅಧ್ಯಾಪಕರ ಸಂಘದ ಪ್ರಧಾನ ಕಾರ್ಯದರ್ಶಿ ಕುಮಾರ ಸುಬ್ರಹ್ಮಣ್ಯ, ಸಂಘಟನಾ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ಬೇಳ, ಕುಂಬಳೆ ಉಪಜಿಲ್ಲಾ ಕಾರ್ಯದರ್ಶಿ ಪುಷ್ಪರಾಜ್ ಕೆ, ರಾಜೇಶ್ ಬಿ ಉಪಸ್ಥಿತರಿದ್ದರು.