ಕುಂಬಳೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಕಾಸರಗೋಡು ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ, ಕುಂಬಳೆ ವಲಯ ಇದರ ಸಂಯುಕ್ತಾಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ ಮತ್ತು ಒಕ್ಕೂಟ ಪದಗ್ರಹಣ ಸಮಾರಂಭ ಇತ್ತೀಚೆಗೆ ಅನಂತಪುರ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ನಡೆಯಿತು.
ಕ್ಷೇತ್ರದ ಅಧ್ಯಕ್ಷ ಮಹಾಲಿಂಗೇಶ್ವರ ಭಟ್ ಎಂ.ವಿ. ದೀಪ ಬೆಳಗಿಸಿ ಉದ್ಘಾಟಿಸಿದರು. ಮಂಜೇಶ್ವರ ತಾಲೂಕು ಭಜನಾ ಪರಿಷತ್ ಅಧ್ಯಕ್ಷ ದಿನೇಶ್ ಚೆರುಗೋಳಿ ಉಪನ್ಯಾಸ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ಯೋಜನಾಧಿಕಾರಿ ಚೇತನಾ.ಎಂ. ಪ್ರಸ್ತಾವಿಕವಾಗಿ ಮಾತನಾಡಿದರು. ಕಾಸರಗೋಡು ಬ್ಲಾಕ್ ಪಂಚಾಯತಿ ಸದಸ್ಯ ಸತ್ಯಶಂಕರ ಭಟ್ ಹಿಳ್ಳೆಮನೆ, ಕಾಸರಗೋಡು ಜನಜಾಗೃತಿ ವೇದಿಕೆ ಸದಸ್ಯ ಯೋಗೀಶ ಕಡಮಣ್ಣಾಯ, ಸೇವಾ ಪ್ರತಿನಿಧಿಗಳಾದ ಸಂಧ್ಯಾ, ಸುಜಾತಾ, ಲತಾ, ಉಷಾ ಉಪಸ್ಥಿತರಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಂಬಳೆ ವಲಯ ಮೇಲ್ವಿಚಾರಕ ಗಂಗಾಧರ ಸ್ವಾಗತಿಸಿ, ಜಿತೇಶ್ ನಾರಾಯಣಮಂಗಲ ನಿರೂಪಿಸಿದರು. ಸೇವಾ ಪ್ರತಿನಿಧಿ ಅರುಣಾ ವಂದಿಸಿದರು.