HEALTH TIPS

ಕೊಂಡೆವೂರು ವಿದ್ಯಾಪೀಠದಲ್ಲಿ ವಿದ್ಯಾರ್ಥಿಸಂಭ್ರಮ


          ಉಪ್ಪಳ: ಕೊಂಡೆವೂರಿನ ಸದ್ಗುರು ಶ್ರೀ ನಿತ್ಯಾನಂದ ವಿದ್ಯಾಪೀಠದ ವಾರ್ಷಿಕೋತ್ಸವ ವಿದ್ಯಾರ್ಥಿ ಸಂಭ್ರಮ ವಿವಿಧ ಕಲಾಸ್ಪರ್ಧೆಗಳು ಹಾಗೂ ಸಾಂಸ್ಕೃತಿಕಕಾರ್ಯಕ್ರಮಗಳೊಂದಿಗೆ ಇತ್ತೀಚೆಗೆ ನಡೆಯಿತು.
     ವಿದ್ಯಾಪೀಠದ ಶಿಶುವಾಟಿಕಾ ವಿಭಾಗದ ಶಿಶುಸಂಗಮ ಕಾರ್ಯಕ್ರಮಕ್ಕೆ ಅಂಬಾರು ಶ್ರೀ ಸದಾಶಿವ ದೇವಸ್ಥಾನದ ಮೊಕ್ತೇಸರ ದೇರಂಬಳ ಕೃಷ್ಣಪ್ಪ ಪೂಜಾರಿಯವರು ಧ್ವಜಾರೋಹಣಗೈದು ಚಾಲನೆ ನೀಡಿದರು. ಬಳಿಕ ನಡೆದ ಸಭಾಕಾರ್ಯಕ್ರಮವನ್ನು ಭಾರತೀಯ ವಿದ್ಯಾನಿಕೇತನದ ಕಾಸರಗೋಡು ಜಿಲ್ಲಾ ಅಧ್ಯಕ್ಷ ಶಿವಶಂಕರನ್ ನಾಯರ್ ದೀಪ ಬೆಳಗಿಸಿ ಉದ್ಘಾಟಿಸಿದರು. ಶಾಲಾ ಕ್ಷೇಮಸಮಿತಿಯ ಅಧ್ಯಕ್ಷ ರಘುರಾಮ್, ಮೋಹನದಾಸ್ ಕೊಂಡೆವೂರು, ಶಾಲಾ ಮಾತೃಸಮಿತಿಯ ಅಧ್ಯಕ್ಷೆ ಆಶಾ ಜಯಪ್ರಕಾಶ್, ಶಿಶುವಾಟಿಕಾಸಮಿತಿಯ ಅಧ್ಯಕ್ಷೆ ತುಳಸಿ, ಶಾಲಾ ಮುಖ್ಯೋಪಾಧ್ಯಾಯಿನಿ ವಾರಿಜಾ ಹಾಗೂ ಆಡಳಿತಾಧಿಕಾರಿ  ಕಮಲಾಕ್ಷ ಎಂ ಉಪಸ್ಥಿತರಿದ್ದರು. ವಿದ್ಯಾಪೀಠದ ಶಿಶುವಾಟಿಕಾವಿಭಾಗದ ಮಕ್ಕಳು ವಿವಿಧ ಸಾಂಸ್ಕೃತಿಕಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
         ಶಾಲಾಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು.  ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕಕಾರ್ಯಕ್ರಮಗಳು ನಡೆದವು. ಬಳಿಕ ಪರಮಪೂಜ್ಯಶ್ರೀ ಯೋಗಾನಂದಸರಸ್ವತೀ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಮಾರೋಪಸಮಾರಂಭದ ಅಧ್ಯಕ್ಷತೆಯನ್ನು ಎಡಕ್ಕಾನ ಫ್ಯಾಮಿಲಿ ಟ್ರಸ್ಟ್ ನ ಸಂಸ್ಥಾಪಕ ಮಹಾಬಲೇಶ್ವರ ಭಟ್, ರಶ್ಯ ಇವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಸಾಧನಾ ಮಹಾಬಲೇಶ್ವರ ಭಟ್ ವಿದ್ಯಾಪೀಠದ ವಿದ್ಯಾರ್ಥಿಗಳ ಸಾಧನೆಯನ್ನೂ, ಕೊಂಡೆವೂರಿನ ಶ್ರೀ ನಿತ್ಯಾನಂದ ಯೋಗಾಶ್ರಮದ ಸಾಮಾಜಿಕ ಕಾರ್ಯಗಳನ್ನೂ ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತಸಮಿತಿಯ ಅಧ್ಯಕ್ಷ ರಾಮಚಂದ್ರ ಚೆರುಗೋಳಿ, ಶಶಿಧರ ಶೆಟ್ಟಿ ಗ್ರಾಮಚಾವಡಿ ಹಾಗೂ ಕೃಷ್ಣಕುಮಾರ್ ಐಲ ಉಪಸ್ಥಿತರಿದ್ದು ಶುಭಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ವಾರಿಜಾ ವಾರ್ಷಿಕ ವರದಿಯನ್ನು ವಾಚಿಸಿದರು. ಇದೇ ಸಂದರ್ಭದಲ್ಲಿ ಶಾಲೆಯಲ್ಲಿ ಶಾಲಾ ಕ್ಷೇಮಸಮಿತಿಯ ಸಹಯೋಗದಿಂದ ನೂತನವಾಗಿ ನಿರ್ಮಿಸಲಾದ ಕಿಂಡರ್‍ಗಾರ್ಟನ್ ಕ್ರೀಡಾಂಗಣವನ್ನು ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಮಹಾಬಲೇಶ್ವರ ಭಟ್, ರಶ್ಯ ಉದ್ಘಾಟಿಸಿದರು. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಉತ್ತಮಸಾಧನೆಗೈದು ಇತರ ವಿದ್ಯಾರ್ಥಿಗಳಿಗೆ ಮಾದರಿಯಾದ ಹತ್ತನೇ ತರಗತಿಯ ವಿದ್ಯಾರ್ಥಿನಿ ಕು. ಪ್ರಜ್ಞಾಳಿಗೆ ಶ್ರೀಗಳು ನಿತ್ಯಾನಂದಪ್ರಶಸ್ತಿಯನ್ನಿತ್ತು ಹರಸಿದರು. ಪ್ರಸ್ತುತ ವರ್ಷ ಕ್ರೀಡಾಕೂಟದಲ್ಲಿ ರಾಷ್ಟ್ರಮಟ್ಟದಲ್ಲಿ ಸ್ಪರ್ಧಿಸಿ ಸಂಸ್ಥೆಗೆ ಕೀರ್ತಿ ತಂದ ಹತ್ತನೇ ತರಗತಿಯ ವಿದ್ಯಾರ್ಥಿನಿ ಕು. ಕವನಶ್ರೀ, ಕಳೆದ ಶೈಕ್ಷಣಿಕವರ್ಷದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ಕು. ಧನುಷಾರನ್ನು  ಸನ್ಮಾನಿಸಲಾಯಿತು. ಶಾಲಾ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭವಾದ ಸಭಾಕಾರ್ಯಕ್ರಮವನ್ನು ಶಿಕ್ಷಕಿಯರಾದ ಕು. ರೇಶ್ಮಾ ಹಾಗೂ ಕು. ನಶ್ಮಿತಾ ನಿರೂಪಿಸಿದರು. ಶಿಕ್ಷಕಿಯರಾದ ಸ್ವಾತಿ ಸ್ವಾಗತಿಸಿ, ಸುನೀತಾ ವಂದಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries