ಬದಿಯಡ್ಕ:ಕೊಡುಗೈದಾನಿ, ಧೀನಬಂಧು ಕಿಳಿಂಗಾರು ಸಾಯಿರಾಮ್ ಭಟ್ ಅವರನ್ನು ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಮಂಡಳಿ ಅಧ್ಯಕ್ಷೆ ವೆಂಕಟಲಕ್ಷ್ಮಿ ಬಸವಲಿಂಗರಾಜು ಅವರು ಭಾನುವಾರ ಕಿಳಿಂಗಾರಿನ ಸಾಯಿರಾಂ ಭಟ್ ಅವರ ಸ್ವಗೃಹದಲ್ಲಿ ಭೇಟಿಮಾಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡೆಮಿಯ ಅಧ್ಯಕ್ಷ ಪ್ರಭಾಕರ ಕಲ್ಲೂರಾಯ, ಕರ್ನಾಟಕ ಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ, ಉಪಾಧ್ಯಕ್ಷ ಪ್ರೊ.ಎ.ಶ್ರೀನಾಥ್, ಮೀಡಿಯಾ ಕ್ಲಾಸಿಕಲ್ ಅಧ್ಯಕ್ಷ ಶ್ರೀಕಾಂತ್ ನೆಟ್ಟಣಿಗೆ, ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡೆಮಿಯ ಪ್ರಧಾನ ಕಾರ್ಯದರ್ಶಿ ಅಖಿಲೇಶ್ ನಗುಮುಗಂ ಹಾಗೂ ಸಾಯಿರಾಂ ಭಟ್ ಅವರ ಮನೆಯ ಸದಸ್ಯರು ಉಪಸ್ಥಿತರಿದ್ದರು.