ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಮಾರ್ಚ್ ಮೊದಲ ವಾರದಲ್ಲಿ ಲೋಕಸಭೆ ಚುನಾವಣೆಯ ದಿನಾಂಕ ಪ್ರಕಟಿಸಲಿದೆ ಎಂದು ಶುಕ್ರವಾರ ಮೂಲಗಳು ತಿಳಿಸಿವೆ.
ಈಗಾಗಲೇ ರಾಜಕೀಯ ಪಕ್ಷಗಳು ಲೋಕಸಭಾ ಚುನಾವಣೆಗೆ ಎಲ್ಲ ರೀತಿಯ ಸಿದ್ಧತೆ ನಡೆಸಿದ್ದು, ಚುನಾವಣೆ ಆಯೋಗ, ಚುನಾವಣೆಗೆ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದು, ಮಾರ್ಚ್ ಮೊದಲ ವಾರದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟಿಸುವ ನಿರೀಕ್ಷೆ ಇದೆ.
ಪ್ರಸಕ್ತ ಲೋಕಸಭೆಯ ಅವಧಿ ಜೂನ್ 3ರಂದು ಕೊನೆಗೊಳ್ಳಲಿದ್ದು, ಏಪ್ರಿಲ್ ಕೊನೆಯ ವಾರ ಅಥವಾ ಮೇ ಮೊದಲ ಎರಡು ವಾರದಲ್ಲಿ ಲೋಕಸಭೆ ಚುನಾವಣೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಈ ಬಾರಿಯ ಲೋಕಸಭಾ ಚುನಾವಣೆಯ ಜತೆ ಜಮ್ಮು ಮತ್ತು ಕಾಶ್ಮೀರ, ಆಂಧ್ರಪ್ರದೇಶ, ಸಿಕ್ಕಿಂ, ಒಡಿಶಾ ಹಾಗೂ ಅರುಣಾಚಲ ಪ್ರದೇಶ ವಿಧಾನಸಭಾ ಚುನಾವಣೆ ಕೂಡ ನಡೆಸುವ ಸಾಧ್ಯತೆ ಇದೆ.
ಜಮ್ಮು ಕಾಶ್ಮೀರ ವಿಧಾನ ಸಭೆಯು ಕಳೆದ 2018ರ ನವೆಂಬರ್‍ನಲ್ಲಿ ವಿಸರ್ಜನೆ???ಂಡಿರುವುದರಿಂದ ಆರು ತಿಂಗಳ ಒಳಗೆ, ಎಂದರೆ ಮೇ ತಿಂಗಳ ಒಳಗಾಗಿ ಚುನಾವಣೆಯನ್ನು ನಡೆಸುವ ಬಾಧ್ಯತೆ ಕೂಡ ಆಯೋಗದ ಮೇಲಿದೆ.