HEALTH TIPS

ಎಚ್ಚರ.. ಲೋಕಸಭೆ ಚುನಾವಣೆ ಕುರಿತು ಸುಳ್ಳು ಸುದ್ದಿ ಹಬ್ಬಿಸಿದರೆ 'ಪೊಲೀಸ್ ಆಗುವಿರಿ ಅತಿಥಿ'

       
        ನವದೆಹಲಿ: ಬಹು ನಿರೀಕ್ಷಿತ ಲೋಕಸಭಾ ಚುನಾವಣೆ ಕುರಿತಂತೆ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಸುಳ್ಳು ಸುಳ್ಳು ಸುದ್ದಿಗಳ ವಿರುದ್ಧ ಕೆಂಗಣ್ಣು ಬೀರಿರುವ ಕೇಂದ್ರ ಚುನಾವಣಾ ಆಯೋಗ ಈ ಬಗ್ಗೆ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದೆ.
       ಈ ಹಿಂದೆ ಕೆಲ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಖ್ಯಾತ ಮೆಸೆಜಿಂಗ್ ತಾಣ ವಾಟ್ಸಪ್ ನಲ್ಲಿ ಲೋಕಸಭೆ ಚುನಾವಣೆ ಕುರಿತು ಸುದ್ದಿಗಳನ್ನು ಹರಿಯ ಬಿಡಲಾಗಿತ್ತು. ಏಪ್ರಿಲ್  ರಿಂದ ಮೇ 17 ರ ಒಳಗೆ ವಿವಿಧ ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು. ಅಲ್ಲದೆ ಲೋಕಸಭೆಯೊಂದಿಗೆ ಮಹಾರಾಷ್ಟ್ರ, ಆಂಧ್ರ ಪ್ರದೇಶ ಸೇರಿದಂತೆ ಇನ್ನೂ ಹಲವು ರಾಜ್ಯಗಳ ವಿಧಾನಸಭೆಗೂ ಚುನಾವಣೆ ನಡೆಸಲಾಗುತ್ತದೆ ಎಂದು ಸುದ್ದಿಯಲ್ಲಿ ಹರಿಯಬಿಡಲಾಗಿತ್ತು. ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
      ಇದೀಗ ಇಂತಹ ಸುಳ್ಳು ಸುದ್ದಿಗಳ ವಿರುದ್ಧ ಕೆಂಗಣ್ಣು ಬೀರಿರುವ ಚುನಾವಣಾ ಆಯೋಗ ಈ ಸಂಬಂಧ ತನಿಖೆ ನಡೆಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿದೆ. ಅಂತೆಯೇ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಸೂಚನೆ ನೀಡಿದೆ. ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳು ದೆಹಲಿ ಚುನಾವಣಾ ಆಯೋಗದ ಮುಖ್ಯ ಅಧಿಕಾರಿಗಳ ಮೂಲಕ ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries