14ರಂದು ಸಾರ್ವಜನಿಕ ಸ್ಮಶಾನ ಲೋಕಾರ್ಪಣೆ
0
ಫೆಬ್ರವರಿ 10, 2019
ಮಂಜೇಶ್ವರ: ವರ್ಕಾಡಿ ಗ್ರಾಮಪಂಚಾಯತಿ ವತಿಯಿಂದ ಮುರತ್ತಣೆಯಲ್ಲಿ ನಿರ್ಮಿಸಲಾದ ಸಾರ್ವಜನಿಕ ಸ್ಮಶಾನದ ಲೋಕಾರ್ಪಣೆ ಫೆ.14ರಂದು ನಡೆಯಲಿದೆ.
ಗ್ರಾಮ ಪಂಚಾಯತಿಯ 2017-18 ನೇ ವಾರ್ಷಿಕ ಯೋಜನೆಯಲ್ಲಿ ಅಳವಡಿಸಿ ಮಂಜೇಶ್ವರ ಬ್ಲಾಕ್ ಪಂಚಾಯತಿ ಸಹಯೋಗದೊಂದಿಗೆ ಈ ಸ್ಮಶಾನ ನಿರ್ಮಿಸಿಲಾಗಿದೆ.
ಅಂದು ಬೆಳಿಗ್ಗೆ 10.30ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಮಂಜೇಶ್ವರ ಬ್ಲಾಕ್ ಪಂಚಾಯತಿ ಅಧ್ಯಕ್ಷ ಎ.ಕೆ.ಎಂ.ಅಶ್ರಫ್ ಸ್ಮಶಾನ ಉದ್ಘಾಟಿಸುವರು. ವರ್ಕಾಡಿ ಗ್ರಾಮಪಂಚಾಯತಿ ಅಧ್ಯಕ್ಷ ಅಬ್ದುಲ್ ಮಜೀದ್ ಬಿ.ಎ. ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತಿ ಅಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ, ಸದಸ್ಯೆ ಪುಷ್ಪಾ ಅಮೆಕ್ಕಳ,ಮಂಜೇಶ್ವರ ಬ್ಲಾಕ್ ಪಂಚಾಯತಿ ಉಪಾಧ್ಯಕ್ಷೆ ಮಮತಾ ದಿವಾಕರ್, ವರ್ಕಾಡಿ ಗ್ರಾಮಪಂಚಾಯತಿ ಉಪಾಧ್ಯಕ್ಷೆ ಸುನಿತ ಡಿಸೋಜಾ ಮೊದಲಾದವರು ಉಪಸ್ಥಿತರಿರುವರು.