2016ನೇ ಸಾಲಿನ ಸಗಟು ಖರೀದಿ ಯೋಜನೆಯಡಿ ಖರೀದಿಸಲು ಅರ್ಜಿ ಆಹ್ವಾನ
0
ಫೆಬ್ರವರಿ 06, 2019
ಬದಿಯಡ್ಕ: ಕರ್ನಾಟಕ ಸರಕಾರದ ಕನ್ನಡ ಪುಸ್ತಕ ಪ್ರಾಧಿಕಾರವು 2016ನೇ ಸಾಲಿನಲ್ಲಿ ಪ್ರಥಮಾವೃತ್ತಿಯಾಗಿ ಮುದ್ರಣಗೊಂಡ ಕನ್ನಡ ಪುಸ್ತಕಗಳನ್ನು ಪ್ರಾಧಿಕಾರದ ಸಗಟು ಖರೀದಿ ಯೋಜನೆಯಡಿ ಖರೀದಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ನಿಗದಿತ ಅರ್ಜಿ ನಮೂನೆಯನ್ನು ಫೆ.1 ರಿಂದ ಫೆ. 28 ರವರೆಗೆ ಪ್ರಾಧಿಕಾರದ ವೆಬ್‍ಸೈಟ್ www.kannadapustakapradhikara.com ಹಾಗೂ ಬೆಂಗಳೂರಿನಲ್ಲಿರುವ ಕನ್ನಡ ಪುಸ್ತಕ ಪ್ರಾಧಿಕಾರದ ಕಚೇರಿ ಮತ್ತು ಆಯಾ ಜಿಲ್ಲೆಯ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಕಚೇರಿ ವೇಳೆಯಲ್ಲಿ ಉಚಿತವಾಗಿ, ಖುದ್ದಾಗಿ ಪಡೆದುಕೊಳ್ಳಬಹುದಾಗಿದೆ. ಎರಡು ಪುಸ್ತಕಗಳ ಪ್ರತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಪಿ.ಓ. 560 002 ಅವರಿಗೆ ಫೆ. 28 ರಂದು ಸಂಜೆ 5 ಗಂಟೆಯೊಳಗೆ ಸಲ್ಲಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ : ಕೇಳು ಮಾಸ್ತರ್, ಅಗಲ್ಪಾಡಿ, ಸಂಚಾಲಕರು ಕನ್ನಡ ಪುಸ್ತಕ ಪ್ರಾಧಿಕಾರದ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆ, ಬದಿಯಡ್ಕ ಮೊ: 08281413173 - ಇದಕ್ಕೆ ಸಂಪರ್ಕಿಸಬಹುದಾಗಿದೆ.