ಸಂಜೆ 5ಕ್ಕೆ ಸೇನೆ, ವಾಯುಪಡೆ, ನೌಕಾಪಡೆ ಮುಖ್ಯಸ್ಥರಿಂದ ಜಂಟಿ ಸುದ್ದಿಗೋಷ್ಠಿ
0
ಫೆಬ್ರವರಿ 28, 2019
ನವದೆಹಲಿ: ಭಾರತ - ಪಾಕಿಸ್ತಾನ ಗಡಿಯಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಭಾರತದ ಭೂ ಸೇನೆ, ವಾಯುಪಡೆ ಮತ್ತು ನೌಕಾಪಡೆಯ ಮುಖ್ಯಸ್ಥರು ಇದೀಗ ಸಂಜೆ 5 ಗಂಟೆಗೆ ಜಂಟಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.
ಕಳೆದ ಫೆಬ್ರವರಿ 14 ರಂದು ನಡೆದ ಪುಲ್ವಾಮ ಉಗ್ರ ದಾಳಿಗೆ ಪ್ರತೀಕಾರವಾಗಿ ಫೆಬ್ರವರಿ 26ರಂದು ಭಾರತೀಯ ವಾಯುಪಡೆ, ಪಾಕಿಸ್ತಾನದಲ್ಲಿರುವ ಉಗ್ರರ ಅಡಗುದಾಣಗಳ ಮೇಲೆ ದಾಳಿ ನಡೆಸಿ 350ಕ್ಕೂ ಹೆಚ್ಚು ಉಗ್ರರನ್ನ ಉಡಾಯಿಸಿತ್ತು. ಇದರಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಅವಮಾನಕ್ಕೆ ಒಳಗಾದ ಪಾಕಿಸ್ತಾನ, ಭಾರತೀಯ ಸೇನೆ ಜೊತೆ ಕಾಲು ಕೆದರಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ದೇಶದಲ್ಲಿ ಯುದ್ಧದ ವಾತಾವರಣ ನಿರ್ಮಾಣ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ ದೇಶದ ಮೂರು ಸೇನಾಪಡೆಗಳ ಮುಖ್ಯಸ್ಥರು ಜಂಟಿ ಸುದ್ದಿಗೋಷ್ಠಿ ನಡೆಸುತ್ತಿದ್ದು, ಗಡಿ ವಿಚಾರದಲ್ಲಿ ಇತ್ತೀಚೆಗೆ ನಡೆದ ಬೆಳವಣಿಗೆ ಬಗ್ಗೆ ಮಾಹಿತಿ ನೀಡುವ ಸಾಧ್ಯತೆ ಇದೆ.