ನವದೆಹಲಿ: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಎಲ್ಲಾ ವಯೋಮಾನದ ಮಹಿಳೆಯರಿಗೂ ಪ್ರವೇಶ ಅವಕಾಶ ನೀಡಿದ ಸುಪ್ರೀಂ ಕೋರ್ಟ್ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿರುವ ಎಲ್ಲಾ ಅರ್ಜಿಗಳನ್ನು ಫೆಬ್ರವರಿ 6ರಂದು ಐವರು ನ್ಯಾಯಾಧೀಶರನ್ನೊಳಗೊಂಡ ಸಾಂವಿಧಾನಿಕ ಪೀಠ ವಿಚಾರಣೆ ನಡೆಸಲಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಸಾಂವಿಧಾನಿಕ ಪೀಠ ಫೆ. 6ರಂದು ಶಬರಿಮಲೆ ತೀರ್ಪು ಮರು ಪರಿಶೀಲನಾ ಅರ್ಜಿಗಳ ವಿಚಾರಣೆ ನಡೆಸಲಿದೆ ಎಂದು ಸರ್ವೋಚ್ಛ ನ್ಯಾಯಾಲಯದ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.
ಕಳೆದ ವರ್ಷ ಸೆಪ್ಟೆಂಬರ್ 28ರಂದು ಅಂದಿನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ನೇತೃತ್ವದ ಸಾಂವಿಧಾನಿಕ ಪೀಠ ಶಬರಿಮಲೆಗೆ ಎಲ್ಲಾ ವಯೋಮಾನದ ಮಹಿಳೆಯರಿಗೂ ಪ್ರವೇಶ ಅವಕಾಶ ನೀಡಿ ತೀರ್ಪು ನೀಡಿದ್ದರು. ಈ ತೀರ್ಪು ಭಾರೀ ಪರ ವಿರೋಧಗಳಿಗೆ ಎಡೆ ಮಾಡಿಕೊಟ್ಟಿದೆ.
ಸುಪ್ರೀಂಕೋರ್ಟ್ ತೀರ್ಪು ಆಕ್ಷೇಪಿಸಿ ಈವರೆಗೂ 48 ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳ ವಿಚಾರಣೆಯನ್ನು ಮುಖ್ಯ ನ್ಯಾಯಾಮೂರ್ತಿ ರಂಜನ್ ಗೊಗೋಯಿ ಹಾಗೂ ನ್ಯಾಯಾಮೂರ್ತಿಗಳಾದ ಆರ್.ಎಫ್. ನಾರೀಮನ್, ಎ.ಎಂ.ಖಾನ್ವಿಲ್ಕರ್, ಡಿ.ವೈ.ಚಂದ್ರಚೂಡ್ ಮತ್ತು ಇಂದು ಮಲ್ಹೋತ್ರ ಅವರ ಪೀಠ ವಿಚಾರಣೆ ನಡೆಸಲಿದೆ.