HEALTH TIPS

ಆಧುನಿಕ ಸಂವಹನ ಮಾಧ್ಯಮಗಳು ವಿದ್ಯಾರ್ಜನೆಗೆ ಪೂರಕವಾಗಿರಬೇಕು- ಯು.ರವಿಕೃಷ್ಣ


              ಬದಿಯಡ್ಕ: ವಿದ್ಯಾರ್ಥಿಗಳು ಎಳವೆಯಲ್ಲಿಯೇ ಮೊಬೈಲುಗಳ ದಾಸರಾಗಿ ತಮ್ಮ ಗುರಿಯಿಂದ ವಿಚಲಿತರಾಗುತ್ತಿರುವುದು ಹೊಸ ದುರಂತ. ಕಂಪ್ಯೂಟರು ಮತ್ತು ಮೊಬೈಲುಗಳು ಆಧುನಿಕ ಜಗತ್ತಿನ ಕೊಡುಗೆ. ಅವುಗಳನ್ನು ಸಮರ್ಪಕವಾಗಿ ಉಪಯೋಗಿಸಿದರೆ ಮಾತ್ರ ಉತ್ತಮ ಭವಿಷ್ಯವನ್ನು ಕಟ್ಟಿಕೊಳ್ಳಲು ಸಾಧ್ಯ. ಈ ಗುರಿಯಿಂದ ವಿಚಲಿತರಾದರೆ ಭವಿಷ್ಯದ ಹಾದಿ ದುರ್ಗಮವಾಗುವುದು. ಆದ್ದರಿಂದ ಉತ್ತಮ ಪ್ರಜೆಗಳಾಗಿ ಬೆಳಗಬೇಕಾದ ವಿದ್ಯಾರ್ಥಿಗಳು ನವ ಸಂವಹನಾ ಮಾಧ್ಯಮಗಳು ಉಂಟುಮಾಡಬಹುದಾದ ಅಪಾಯಗಳ ಬಗ್ಗೆ ಜಾಗೃತರಾಗಿ ತಮ್ಮ ಅಧ್ಯಯನದ ಕಡೆಗೆ ಏಕಾಗ್ರಚಿತ್ತರಾಗಬೇಕು ಎಂದು ನಿವೃತ್ತ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ಅಭಿಪ್ರಾಯಪಟ್ಟರು.
      ಅವರು ಬುಧವಾರ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಜರಗಿದ ವಧರ್ಂತ್ಯುತ್ಸವದ ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
        ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎಸ್.ನಾರಾಯಣ ಹಾಗೂ ಮಾತೃ ಸಂಘದ ಅಧ್ಯಕ್ಷೆಯರಾದ ಪುಷ್ಪಲತಾ ಮತ್ತು ಪಾವನಾ ಮಹೇಶ್ ಶುಭಹಾರೈಸಿದರು. ಈ ವರ್ಷ ಸೇವೆಯಿಂದ ನಿವೃತ್ತರಾಗಲಿರುವ ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಎಚ್.ಎನ್.ಮೀನಾಕ್ಷಿ ಇವರಿಗೆ ಶಾಲಾ ರಕ್ಷಕ ಶಿಕ್ಷಕ ಸಂಘದ ವತಿಯಿಂದ ಗೌರವ ಸಲ್ಲಿಸಲಾಯಿತು. ಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ಪಿ.ಎ.ಕೃಷ್ಣಯ್ಯ ಬಹುಮಾನಗಳನ್ನು ವಿತರಿಸಿದರು.
      ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲಾ ಮುಖ್ಯೋಪಾಧ್ಯಾಯ ವೆಂಕಟರಾಜ ಸಿ.ಎಚ್ ವರದಿ ವಾಚಿಸಿದರು. ಮಹಾಜನ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ಜಯದೇವ ಖಂಡಿಗೆ ಸ್ವಾಗತಿಸಿ, ಹೈಯರ್ ಸೆಕೆಂಡರಿ ವಿಭಾಗದ ಪ್ರಾಂಶುಪಾಲ ಶಿವಪ್ರಕಾಶ್.ಎಂ.ಕೆ ವಂದಿಸಿದರು. ಶಿಕ್ಷಕಿ  ಸರಿತಾ ಪಿ.ಎಸ್ ಕಾರ್ಯಕ್ರಮವನ್ನು ನಿರೂಪಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries