ಹೊಸಬೆಟ್ಟು ಜುಮ್ಮದ ಮನೆ ಬ್ರಹ್ಮಕಲಶೋತ್ಸವ
0
ಫೆಬ್ರವರಿ 10, 2019
ಮಂಜೇಶ್ವರ: ಹೊಸಬೆಟ್ಟು ಜುಮ್ಮದ ಮನೆ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಾ.19 ರಿಂದ 22ರ ವರೆಗೆ ಧಾರ್ಮಿಕ, ವೈದಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಪೂರ್ವಭಾವೀ ಸಭೆ ಶುಕ್ರವಾರ ಶ್ರೀಕ್ಷೇತ್ರ ಪರಿಸರದಲ್ಲಿ ಒಡಿಯೂರು ಶ್ರೀಗುರುದೇವಾನಂದ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯಿತು.
ನಿಟ್ಟೆಗುತ್ತು ರವಿರಾಜ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಅಜಿತ್ ಕುಮಾರ್ ರೈ ಮಾಲಾಡಿ, ಗೋಪಾಲ ಶೆಟ್ಟಿ ಅರಿಬೈಲು, ಹರಿಶ್ಚಂದ್ರ ಮಂಜೇಶ್ವರ ಮೊದಲಾದವರು ಉಪಸ್ಥಿತರಿದ್ದರು. ಸಮಿತಿ ಸದಸ್ಯರು, ಪದಾಧಿಕಾರಿಗಳು ಭಕ್ತಾಭಿಮಾನಿಗಳು ಉಪಸ್ಥಿತರಿದ್ದು ಸಲಹೆಸೂಚನೆ ನೀಡಿದರು.