ಕುಂಜತ್ತೂರು ಶ್ರೀ ಮಹಾಲಿಂಗೇಶ್ವರ ವಿದ್ಯಾನಿಕೇತನ ಶಾಲಾ ವಾರ್ಷಿಕೋತ್ಸವ
0
ಫೆಬ್ರವರಿ 10, 2019
ಮಂಜೇಶ್ವರ: ಕುಂಜತ್ತೂರಿನ ಶ್ರೀ ಮಹಾಲಿಂಗೇಶ್ವರ ವಿದ್ಯಾನಿಕೇತನ ಶಾಲಾ ವಾರ್ಷಿಕೋತ್ಸವ ವಿವಿಧ ಕಾರ್ಯಕ್ರಮಗಳೊಂದಿಗೆ ಇತ್ತೀಚೆಗೆ ಜರಗಿತು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕರ್ನಾಟಕ ರಾಜ್ಯ ವಿದ್ಯಾಭಾರತಿ ಕಾರ್ಯದರ್ಶಿ ವಸಂತ ಮಾಧವ ಉದ್ಘಾಟಿಸಿದರು. ಮಂಗಳೂರಿನ ಎ.ಜೆ.ವೈದ್ಯಕೀಯ ಕಾಲೇಜು ನೇತ್ರ ತಜ್ಞ ಡಾ.ಸುಧೀರ್ ಹೆಗ್ಡೆ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವಿಶ್ವನಾಥ ಶೆಟ್ಟಿ ಅಧ್ಯಕ್ಷತೆ ವಹಿಸಿದರು. ವೇದಿಕೆಯಲ್ಲಿ ನಿವೃತ್ತ ಸಹಕಾರಿ ಬ್ಯಾಂಕ್ ಕಾರ್ಯದರ್ಶಿ ಡಿ.ಕೃಷ್ಣ ಶೆಟ್ಟಿ, ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಸುರೇಶ್ ಶೆಟ್ಟಿ, ಶಾಲಾ ಪ್ರಾಂಶುಪಾಲ ದಾಮೋದರ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕುಳೂರುಬೀಡು ದಾಸಣ್ಣ ಆಳ್ವ ಅವರನ್ನು ಸಮ್ಮಾನಿಸಲಾಯಿತು. ಶಾಲಾ ಪ್ರಾಂಶುಪಾಲ ದಾಮೋದರ ಶೆಟ್ಟಿ ಸ್ವಾಗತಿಸಿ, ಶಿಕ್ಷಕಿ ಮಮತಾ ಯಶವಂತ್ ವಂದಿಸಿದರು. ಶಿಕ್ಷಕಿಯರಾದ ಆಶಾ ರವಿ, ನಯನ ಪ್ರಭು, ಪೂರ್ಣಿಮಾ ಪ್ರಭಾ ಕಾರ್ಯಕ್ರಮವನ್ನು ನಿರೂಪಿಸಿದರು. ಬಳೀಕ ವಿದ್ಯಾನಿಕೇತನದ ವಿದ್ಯಾರ್ಥಿಗಳಿಂದ ವರ್ಣೋತ್ಸವ ಸಾಂಸ್ಕøತಿಕ ಕಾರ್ಯಕ್ರಮ ಜರಗಿತು.