ಕುಳೂರು ಶಾಲಾ ವಾರ್ಷಿಕೋತ್ಸವ
0
ಫೆಬ್ರವರಿ 04, 2019
ಮಂಜೇಶ್ವರ: ಕುಳೂರು ಕಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ವಿವಿಧ ಕಾರ್ಯಕ್ರಮಗಳೊಂದಿಗೆ ಇತ್ತೀಚೆಗೆ ಜರಗಿತು.
ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪ್ರಮೋದ್ ಶೆಟ್ಟಿ ಸಾಲೆದಪಡ್ಪು ಧ್ವಜಾರೋಹಣಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಭಾ ಕಾರ್ಯಕ್ರಮವನ್ನು ಮೀಂಜ ಗ್ರಾಮ ಪಂಚಾಯತಿ ಅಧ್ಯಕ್ಷೆ ಶಂಶಾದ್ ಶುಕೂರ್ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಕಂಚಿಲ ವಹಿಸಿದ್ದರು. ಗ್ರಾ.ಪಂ. ಸದಸ್ಯೆ ಚಂದ್ರಾವತಿ ವಿ.ಪಿ, ಕುಂಬಳೆ ಗ್ರಾ.ಪಂ. ಉಪಾಧ್ಯಕ್ಷೆ ಗೀತಾ ಲೋಕನಾಥ್ ಶೆಟ್ಟಿ, ಕೆನರಾ ಬ್ಯಾಂಕ್‍ನ ನಿವೃತ್ತ ಹಿರಿಯ ಪ್ರಬಂಧಕ ಪದ್ಮನಾಭ ಶೆಟ್ಟಿ ಮಾಣೂರು ಕುಳೂರು, ಮಂಗಳೂರಿನ ಎಕ್ಸ್‍ಫರ್ಟ್ ಕಾಲೇಜಿನ ಉಪನ್ಯಾಸಕ ಬಾಲಕೃಷ್ಣ ಶೆಟ್ಟಿ ಎಲಿಯಾಣ, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯ ಚಂದ್ರಹಾಸ, ಸಂಘದ ಕೋಶಾಧಿಕಾರಿ ಜಗದೀಶ್ ಶೆಟ್ಟಿ ಎಲಿಯಾಣ, ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪ್ರಮೋದ್ ಶೆಟ್ಟಿ ಸಾಲೆದಪಡ್ಪು, ಮಾತೃ ಸಂಘದ ಅಧ್ಯಕ್ಷೆ ಆಶಾಲತಾ ಕುಳೂರು. ಪ್ರೀಪ್ರೈಮರಿ ವಿಭಾಗದ ಅಧ್ಯಕ್ಷ ಕಮಲಾಕ್ಷ ಕಲ್ಕಾರ್ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಕಂಚಿಲ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪ್ರಮೋದ್ ಶೆಟ್ಟಿ ಸಾಲೆದಪಡ್ಪು ಹಾಗು ಶಾಲೆಯ ಲಾಂಛನವನ್ನು ರಚಿಸಿದ ಪ್ರವೀಣ್ ಕುಮಾರ್ ಚಿಗುರುಪಾದೆ ಅವರನ್ನು ಅಭಿನಂದಿಸಿ ಗೌರವಿಸಲಾಯಿತು. ವಾರ್ಷಿಕೋತ್ಸವದ ಪ್ರಯುಕ್ತ ಶಾಲಾ ಮಕ್ಕಳಿಗೆ ಹಾಗೂ ಊರವರಿಗೆ ನಡೆಸಿದ ಕ್ರೀಡಾ ಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ವಾರ್ಷಿಕ ವರದಿ ವಾಚಿಸಿದರು. ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಹರಿರಾಮ ಕುಳೂರು ಸ್ವಾಗತಿಸಿ, ಶಿಕ್ಷಕಿ ಸೌಮ್ಯಾ ಪಿ. ವಂದಿಸಿದರು. ಅಧ್ಯಾಪಕ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಶಾಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಹಾಗೂ ಶಾಲಾ ಹಳೆ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಿತು. ಯಶಸ್ವೀ ಕಲಾವಿದರು ಮಂಜೇಶ್ವರ ಇವರಿಂದ `ಏತ್ ಪಂಡಲಾ ಆತೆ' ಎನ್ನುವ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಂಡಿತು.