ಬಜಕೂಡ್ಲು : ಶಿವರಾತ್ರಿ ಮಹೋತ್ಸವ
0
ಫೆಬ್ರವರಿ 25, 2019
ಪೆರ್ಲ: ಬಜಕೂಡ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವದ ಅಂಗವಾಗಿ ಶ್ರೀ ದೇವರಿಗೆ ಶತರುದ್ರಾಭಿಷೇಕ ಮತ್ತು ಬಲಿವಾಡು ಕೂಟ ಮಾರ್ಚ್ 4ರಂದು ಜರಗಲಿದೆ. ಬ್ರಹ್ಮಶ್ರೀ ದೇಲಂಪಾಡಿ ಬಾಲಕೃಷ್ಣ ತಂತ್ರಿ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಜರಗಲಿದೆ. ಸಾಯಂಕಾಲ ಸೂರ್ಯಾಸ್ತದಿಂದ ಮರುದಿನ ಸೂರ್ಯೋದಯದ ವರೆಗೆ ಶ್ರೀ ಮಹಾಲಿಂಗೇಶ್ವರ ಭಜನಾ ಸಂಘದ ವತಿಯಿಂದ ಶಿವರಾತ್ರಿ ಭಜನಾ ಮಹೋತ್ಸವ ನಡೆಯಲಿದೆ.