ಮುಳ್ಳೇರಿಯ ಹವ್ಯಕ ಮಂಡಲದ ಸಭೆ
0
ಫೆಬ್ರವರಿ 05, 2019
ಪೆರ್ಲ: ಮುಳ್ಳೇರಿಯ ಹವ್ಯಕ ಮಂಡಲದ ಮಾಸಿಕ ಸಭೆ ಪೆರ್ಲ ಸಮೀಪದ ಬಜಕೂಡ್ಲು ಅಮೃತಧಾರಾ ಗೋಶಾಲೆಯಲ್ಲಿ ಇತ್ತೀಚೆಗೆ ಜರಗಿತು.
ದೀಪಜ್ವಲನ, ಧ್ವಜಾರೋಹಣ, ಶಂಖನಾದ, ಗುರುವಂದನೆ, ಗೋಸ್ತುತಿಯೊಂದಿಗೆ ಸಭೆ ಪ್ರಾರಂಭವಾಯಿತು. ಕಾರ್ಯದರ್ಶಿ ಬಾಲಸುಬ್ರಹ್ಮಣ್ಯ ಭಟ್ ಸರ್ಪಮಲೆ ಪ್ರಾಸ್ತಾವಿಕವಾಗಿ ಮಾತನಾಡಿ, ಗತಸಭೆಯ ವರದಿಯನ್ನು ಮಂಡಿಸಿದರು.
ವಲಯ ಪದಾಧಿಕಾರಿಗಳು ವಲಯ ವರದಿಗಳನ್ನಿತ್ತರು. ವಿಭಾಗ ಪ್ರಧಾನರು ಆಯಾ ವಿಭಾಗಗಳ ವರದಿ ನೀಡಿ ಮಾಹಿತಿಗಳನ್ನಿತ್ತರು. ಸೇವಾ ಅಗ್ರ್ಯ - ಗೋವಿಗಾಗಿ ಮೇವು ಯೋಜನೆಯ ಕುರಿತು ಶ್ರೀರಾಮಚಂದ್ರಾಪುರ ಮಠದ ಕಾಮದುಘಾ ಸಂಚಾಲಕ ಡಾ.ವೈ.ವಿ.ಕೆ.ಕೃಷ್ಣಮೂರ್ತಿ ಸಮಗ್ರ ಮಾಹಿತಿಗಳನ್ನಿತ್ತರು. ಮಂಡಲಾಧ್ಯಕ್ಷ ಪ್ರೊ.ಶ್ರೀಕೃಷ್ಣ ಭಟ್ ಅಧ್ಯಕ್ಷತೆ ವಹಿಸಿದ್ದರು.
ಸಾಮೂಹಿಕ ಭಜನಾ ರಾಮಾಯಣ, ಸಾಮೂಹಿಕ ರಾಮಜಪ, ಶಾಂತಿಮಂತ್ರ, ಧ್ವಜಾವರೋಹಣ ಶಂಖನಾದವಾಗಿ ಸಭೆ ಮುಕ್ತಾಯವಾಯಿತು.