ಶ್ರೀ ಕುಮಾರಸ್ವಾಮಿ ವಿದ್ಯಾಮಂದಿರದ ಶಾಲಾ ವರ್ಧಂತ್ಯುವ
0
ಫೆಬ್ರವರಿ 08, 2019
ಬದಿಯಡ್ಕ: ಬೇಳ ಶ್ರೀ ಕುಮಾರಸ್ವಾಮಿ ವಿದ್ಯಾಮಂದಿರದ ಶಾಲಾ ವರ್ಧಂತ್ಯುವದ ಸಭಾ ಕಾರ್ಯಕ್ರಮವನ್ನು ಬದಿಯಡ್ಕ ಗ್ರಾಮಪಂಚಾಯತಿ ಅಧ್ಯಕ್ಷ ಕೆ.ಎನ್.ಕೃಷ್ಣ ಭಟ್ ದೀಪ ಬೆಳಗಿಸಿ ಉದ್ಘಾಟಿಸಿದರು.
ಕುಂಬಳೆ ಶೇಡಿಕಾವು ಶ್ರೀಕೃಷ್ಣ ವಿದ್ಯಾಲಯದ ಸಂಚಾಲಕ ಶೇಂತಾರು ನಾರಾಯಣ ಭಟ್ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಕೆ.ಕೈಲಾಸಮೂರ್ತಿ ಮಾತನಾಡಿದರು. ಈ ಸಂದರ್ಭದಲ್ಲಿ ವಿದ್ಯಾಲಯದಿಂದ ಬೀಳ್ಕೊಳ್ಳಲಿರುವ ಶಿಕ್ಷಕಿ ಹೇಮಲತಾರನ್ನು ಸಂಸ್ಥೆ ಹಾಗೂ ರಕ್ಷಕ ಶಿಕ್ಷಕ ವೃಂದದ ವತಿಯಿಂದ ಗೌರವಿಸಲಾಯಿತು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ರಮೇಶ್ ಕಳೇರಿ ಬೇಳ, ಸ್ಥಳದಾನಿ ಕೇಶವ ಕುಮಾರಮಂಗಲ, ಮಾತೃಮಂಡಳಿಯ ಅಧ್ಯಕ್ಷೆ ಮಮತಾ ಉಪಸ್ಥಿತರಿದ್ದರು. ಅಧ್ಯಾಪಿಕೆಯರಾದ ಹೇಮಾ, ಅನಿತಾ ಕಾರ್ಯಕ್ರಮ ನಿರೂಪಿಸಿದರು. ಉದಯಕುಮಾರ್ ಮೈಕುರಿ ಸ್ವಾಗತಿಸಿ, ಬಾಲಕೃಷ್ಣ ವಂದಿಸಿದರು.