ಸಹಕಾರ ಭಾರತಿ ಜಿಲ್ಲಾ ಕಾರ್ಯಾಲಯ ಉದ್ಘಾಟನೆ
0
ಫೆಬ್ರವರಿ 28, 2019
ಕಾಸರಗೋಡು: ಸಹಕಾರ ಭಾರತಿ ಕಾಸರಗೋಡು ಜಿಲ್ಲಾ ಸಮಿತಿ ಕಾರ್ಯಾಲಯದ ಉದ್ಘಾಟನೆಯನ್ನು ಅಖಿಲ ಭಾರತ ಕುಟುಂಬ ಪ್ರಭೋಧಿನಿ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಸಹಕಾರ ಭಾರತಿ ಜಿಲ್ಲಾ ಅಧ್ಯಕ್ಷ ಗಣಪತಿ ಕೋಟೆಕಣಿ ಅಧ್ಯಕ್ಷತೆ ವಹಿಸಿದರು. ಸಹಕಾರ ಭಾರತಿ ಅಖಿಲ ಭಾರತ ಕಾರ್ಯದರ್ಶಿ ಕರುಣಾಕರನ್ ನಂಬ್ಯಾರ್ ಸಂದರ್ಭೋಚಿತವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕ್ಯಾಂಪೆÇ್ಕೀ ಅಧ್ಯಕ್ಷರಾದ ಸತೀಶ್ಚಂದ್ರ ಎಸ್.ಆರ್, ಸಹಕಾರ ಭಾರತಿ ರಾಜ್ಯ ಸಮಿತಿ ಸದಸ್ಯರಾದ ಐತ್ತಪ್ಪ ಮವ್ವಾರ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ನ್ಯಾಯವಾದಿ ಕೆ.ಶ್ರೀಕಾಂತ್, ಬಿಜೆಪಿ ಕೇಂದ್ರ ಸಮಿತಿ ಸದಸ್ಯರಾದ ಸಂಜೀವ ಶೆಟ್ಟಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಭಾಗ ಸಂಘ ಚಾಲಕ್ ಗೋಪಾಲ ಚೆಟ್ಟಿಯಾರ್ ಮೊದಲಾದ ಗಣ್ಯರು ಹಾಗು ಸಹಕಾರಿ ಸಂಸ್ಥೆಗಳ ಅಧ್ಯಕ್ಷರುಗಳು, ನಿರ್ದೇಶಕರುಗಳು ಭಾಗವಹಿಸಿದರು. ದಿಲೀಪ್ ಪೆರ್ಲ ಸಹಕಾರಿ ಗೀತೆ ಹಾಡಿದರು. ಅನಂತಪದ್ಮನಾಭ ಪ್ರಾರ್ಥನೆ ಹಾಡಿದರು. ಸಹಕಾರ ಭಾರತಿ ರಾಜ್ಯ ಸಮಿತಿ ಸದಸ್ಯರಾದ ಗಣೇಶ್ ಪಾರೆಕಟ್ಟೆ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಶಂಕರನಾರಾಯಣ ಭಟ್ ಕಿದೂರು ವಂದಿಸಿದರು.